
ಚಂಡೀಗಢ: ಭೂ ವಿವಾದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಬಿಜೆಪಿ ನಾಯಕನನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಹರಿಯಾಣದ ಸೋನಿಪತ್ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.
ಮೃತ ಬಿಜೆಪಿ ನಾಯಕನನ್ನು ಮುಂಡ್ಲಾನಾ ಮಂಡಲ ಅಧ್ಯಕ್ಷ ಸುರೇಂದ್ರ ಜವಾಹರ್ ಎಂದು ಗುರ್ತಿಸಲಾಗಿದೆ. ಕಳೆದ ರಾತ್ರಿ ಸುರೇಂದ್ರ ಜವಾಹರ್ ಬೆನ್ನಟ್ಟಿರುವ ದುಷ್ಕರ್ಮಿಗಳು, ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.
ಘಟನೆಯ ದೃಶ್ಯಾವಳಿಗಳು ಸ್ಥಳೀಯ ಸಿಸಿಟಿವಿಗಳಲ್ಲಿ ಸೆರೆಯಾಗಿದೆ. ದುಷ್ಕರ್ಮಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಸುರೇಂದ್ರ ಅವರು ಓಡಿದ್ದು, ಅಂಗಡಿಯೊಂದರ ಒಳಗೆ ಹೋಗಿರುವುದು ಕಂಡು ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.
Advertisement