
ಲಖನೌ: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಶಾಲೆಗೆ ನುಗ್ಗಿ ದಾಂಧಲೆ ನಡೆಸಿರುವ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗತೊಡಗಿದೆ.
ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ. ಶಿವ ಕುಮಾರ್ ಎಂಬ ವ್ಯಕ್ತಿ ಮದ್ಯ ಸೇವಿಸಿ ಶಾಲೆಗೆ ನುಗ್ಗಿದ್ದಾನೆ. ತನ್ನ ಪ್ಯಾಂಟ್‌ನಲ್ಲಿ ಮದ್ಯದ ಬಾಟಲಿಯನ್ನು ಇಟ್ಟುಕೊಂಡು ಶಾಲೆಯಲ್ಲಿ ದಾಂಧಲೆ ನಡೆಸಿದ್ದಾನೆ. ಶಾಲೆಯ ಬೆಂಚ್ ಮೇಲೆ ಕುಳಿತುಕೊಂಡ ಈ ವ್ಯಕ್ತಿ ಮಹಿಳಾ ಶಿಕ್ಷಕರೊಂದಿಗೆ ಅಸಭ್ಯವಾಗಿ ವರ್ತಿಸಿ, ಬೆದರಿಕೆ ಹಾಕಿದ್ದಾನೆ.
ಈ ವ್ಯಕ್ತಿಯ ಅಸಭ್ಯ ವರ್ತನೆಯನ್ನು ಮಹಿಳಾ ಶಿಕ್ಷಕಿಯೊಬ್ಬರು ಫೋನ್‌ನಲ್ಲಿ ರೆಕಾರ್ಡ್ ಮಾಡಿದ್ದಾರೆ. ತರಗತಿಯಲ್ಲಿದ್ದ ಓರ್ವ ಹುಡುಗ ಶಿವಕುಮಾರ್ ಗೆ ಹೊರಗೆ ಹೋಗುವಂತೆ ಹೇಳಿ ಗದರಿಸಲು ಪ್ರಯತ್ನಿಸಿದ್ದಾನೆ. ಆದರೆ ಆತ ತನ್ನ ಹುಚ್ಚಾಟವನ್ನು ಇನ್ನಷ್ಟು ಹೆಚ್ಚು ಮಾಡಿ ತನ್ನ ಶರ್ಟ್ ತೆಗೆದು ತರಗತಿಯಲ್ಲಿ ಅಸಭ್ಯವಾಗಿ ನಡೆದುಕೊಂಡಿದ್ದಾನೆ. ಅಲ್ಲದೇ ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನುದ್ದೇಶಿಸಿ "ನಿಮ್ಮ ಕರ್ತವ್ಯದ ಸಮಯ ಮುಗಿದಿದೆ, ಇಲ್ಲಿಂದ ಹೊರಡಿ" ಎಂದು ಬೆದರಿಕೆ ಹಾಕಿದ್ದಾನೆ.
ಶಿಕ್ಷಕರು ಘಟನೆಯ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಶಿವಕುಮಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ
Advertisement