ರಾಜ್ಯಗಳ ಮೇಲೆ ಯಾವುದೇ ಭಾಷೆಯನ್ನು ಹೇರುವುದಿಲ್ಲ: ರಾಜ್ಯಸಭೆಗೆ ಕೇಂದ್ರ ಸರ್ಕಾರ ಸ್ಪಷ್ಟನೆ

ಬಹುಭಾಷಾವಾದ ಹಾಗೂ ರಾಷ್ಟ್ರೀಯ ಏಕತೆಯನ್ನು ಉತ್ತೇಜಿಸುವ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ತ್ರಿಭಾಷಾ ಸೂತ್ರವನ್ನು ಜಾರಿಗೆ ತರುವುದನ್ನು ಮುಂದುವರಿಸಲಾಗುವುದು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಯಾವುದೇ ರಾಜ್ಯದ ಮೇಲೆ ಯಾವುದೇ ಭಾಷೆಯನ್ನು ಹೇರುವುದಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ ರಾಜ್ಯಸಭೆಗೆ ತಿಳಿಸಿದೆ.

2020 ರ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ), ಇತರ ವಿಷಯಗಳ ಜೊತೆಗೆ, ಪ್ಯಾರಾ 4.13 ರಲ್ಲಿ, ಸಾಂವಿಧಾನಿಕ ನಿಬಂಧನೆಗಳು, ಜನರು, ಪ್ರದೇಶಗಳು, ಒಕ್ಕೂಟದ ಆಕಾಂಕ್ಷೆಗಳು ಮತ್ತು ಬಹುಭಾಷಾವಾದ ಹಾಗೂ ರಾಷ್ಟ್ರೀಯ ಏಕತೆಯನ್ನು ಉತ್ತೇಜಿಸುವ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ತ್ರಿಭಾಷಾ ಸೂತ್ರವನ್ನು ಜಾರಿಗೆ ತರುವುದನ್ನು ಮುಂದುವರಿಸಲಾಗುವುದು ಎಂದು ಶಿಕ್ಷಣ ಖಾತೆ ರಾಜ್ಯ ಸಚಿವ ಡಾ. ಸುಕಾಂತ ಮಜುಂದಾರ್ ಅವರು ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.

"ಆದಾಗ್ಯೂ, ತ್ರಿಭಾಷಾ ಸೂತ್ರದಲ್ಲಿ ಹೆಚ್ಚಿನ ನಮ್ಯತೆ ಇರುತ್ತದೆ ಮತ್ತು ಯಾವುದೇ ರಾಜ್ಯದ ಮೇಲೆ ಯಾವುದೇ ಭಾಷೆಯನ್ನು ಹೇರಲಾಗುವುದಿಲ್ಲ" ಎಂದು ಅವರು ಹೇಳಿದ್ದಾರೆ.

ಸಿಪಿಐ(ಎಂ) ನಾಯಕ ಡಾ. ಜಾನ್ ಬ್ರಿಟ್ಟಾಸ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, "ಮೂರು ಭಾಷೆಗಳಲ್ಲಿ ಕನಿಷ್ಠ ಎರಡು ಭಾರತೀಯ ಸ್ಥಳೀಯ ಭಾಷೆಗಳನ್ನು ಕಲಿಸಲಾಗುವುದು. ಮಕ್ಕಳು ಕಲಿಯುವ ಮೂರು ಭಾಷೆಗಳು ರಾಜ್ಯಗಳು, ಪ್ರದೇಶಗಳು ಮತ್ತು ಸಹಜವಾಗಿ ವಿದ್ಯಾರ್ಥಿಗಳ ಆಯ್ಕೆಯಾಗಿರುತ್ತವೆ" ಎಂದು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
72ನೇ ವಸಂತಕ್ಕೆ ಕಾಲಿಟ್ಟ ಸ್ಟಾಲಿನ್: 'ಹಿಂದಿ ಹೇರಿಕೆ'ಗೆ ವಿರೋಧ ನನ್ನ ಹುಟ್ಟುಹಬ್ಬದ ಸಂದೇಶ!

ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಅಡಿಯಲ್ಲಿ ಹಿಂದಿ ಹೇರಿಕೆಯ ವಿರುದ್ಧ ತಮಿಳುನಾಡಿನಲ್ಲಿ ನಡೆಯುತ್ತಿರುವ ಕಳವಳಗಳು ಮತ್ತು ಅಭಿಯಾನದ ಬಗ್ಗೆ ಸರ್ಕಾರಕ್ಕೆ ತಿಳಿದಿದೆಯೇ ಎಂದು ಸಿಪಿಎಂ ನಾಯಕ ಪ್ರಶ್ನಿಸಿದ್ದರು.

ವಿಶೇಷವಾಗಿ, ತಾವು ಕಲಿಯುತ್ತಿರುವ ಮೂರು ಭಾಷೆಗಳಲ್ಲಿ ಒಂದು ಅಥವಾ ಹೆಚ್ಚಿನದನ್ನು ಬದಲಾಯಿಸಲು ಬಯಸುವ ವಿದ್ಯಾರ್ಥಿಗಳು 6 ಅಥವಾ 7ನೇ ತರಗತಿಯಲ್ಲಿ ಹಾಗೆ ಮಾಡಬಹುದು ಎಂದು ಸಚಿವರು ಹೇಳಿದರು.

NEP 2020 ವಿದ್ಯಾರ್ಥಿಗಳು ತಾವು ಅಧ್ಯಯನ ಮಾಡಲು ಬಯಸುವ ಭಾಷೆಯನ್ನು ಆಯ್ಕೆ ಮಾಡಲು ಅನುಮತಿಸುತ್ತದೆ. ಮೂರು ಭಾಷೆಗಳಲ್ಲಿ ಕನಿಷ್ಠ ಎರಡು ಸ್ಥಳೀಯ ಭಾಷೆಯಾಗಿರಬೇಕು ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com