ಕ್ಷೇತ್ರ ಪುನರ್ ವಿಂಗಡಣೆ: ಸಂಸತ್ತಿನ ಉಭಯ ಸದನಗಳಲ್ಲಿ ಗದ್ದಲ, ನಾಳೆಗೆ ಕಲಾಪ ಮುಂದೂಡಿಕೆ

ಮಧ್ಯಾಹ್ನ 2 ಗಂಟೆಗೆ ಕಲಾಪ ಪುನರ್ ಆರಂಭವಾಗುತ್ತಿದ್ದಂತೆಯೇ, ವಿಪಕ್ಷ ಸಂಸದರು ಪ್ರತಿಭಟನೆಯನ್ನು ಮುಂದುವರೆಸಿದರು. ಸಬಾಧ್ಯಕ್ಷರ ಪೀಠದಲ್ಲಿದ್ದ ಕೃಷ್ಣ ಪ್ರಸಾದ್ ತೆನ್ನೆಟಿ ಅವರು, ಸರಿಯಾದ ಉಡುಪು ಧರಿಸಿ ಸದನಕ್ಕೆ ಮರಳುವಂತೆ ಪ್ರತಿಪಕ್ಷದ ಸದಸ್ಯರಿಗೆ ಮನವಿ ಮಾಡಿದರು.
opposition Protest
ಸಂಸತ್ತಿನ ಹೊರಗೆ ವಿಪಕ್ಷ ಸದಸ್ಯರ ಪ್ರತಿಭಟನೆ
Updated on

ನವದೆಹಲಿ: ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ ವಿರುದ್ಧ ವಿಪಕ್ಷ ಪಕ್ಷದ ಸಂಸದರು ಇಂದು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಟೀ ಶರ್ಟ್‌ಗಳನ್ನು ಧರಿಸಿ ಪ್ರತಿಭಟನೆ ನಡೆಸಿದ್ದರಿಂದ ತೀವ್ರ ಗದ್ದಲ, ಕೋಲಾಹಲ ಏರ್ಪಟ್ಟು ಸಂಸತ್ತಿನ ಉಭಯ ಸದನಗಳ ಕಲಾಪವನ್ನು ನಾಳೆ ಮುಂದೂಡಲಾಯಿತು.

ಲೋಕಸಭೆ ಹಾಗೂ ವಿಧಾನಸಭೆ ಕ್ಷೇತ್ರ ಪುನರ್ ವಿಂಗಡಣೆ ವಿಷಯದ ಕುರಿತು ಘೋಷಣೆಗಳನ್ನು ಹೊಂದಿರುವ ಟಿ-ಶರ್ಟ್‌ಗಳನ್ನು ಧರಿಸಿ ವಿಪಕ್ಷ ಸಂಸದರು ಪ್ರತಿಭಟಿಸಿದ್ದರಿಂದ ಮಧ್ಯಾಹ್ನ 12 ಗಂಟೆಯವರೆಗೂ ತದನಂತರ ಮಧ್ಯಾಹ್ನ 2 ಗಂಟೆಯವರೆಗೂ ಕಲಾಪವನ್ನು ಮುಂದೂಡಲಾಗಿತ್ತು.

ಬಳಿಕ ಮಧ್ಯಾಹ್ನ 2 ಗಂಟೆಗೆ ಕಲಾಪ ಪುನರ್ ಆರಂಭವಾಗುತ್ತಿದ್ದಂತೆಯೇ, ವಿಪಕ್ಷ ಸಂಸದರು ಪ್ರತಿಭಟನೆಯನ್ನು ಮುಂದುವರೆಸಿದರು. ಸಬಾಧ್ಯಕ್ಷರ ಪೀಠದಲ್ಲಿದ್ದ ಕೃಷ್ಣ ಪ್ರಸಾದ್ ತೆನ್ನೆಟಿ ಅವರು, ಸರಿಯಾದ ಉಡುಪು ಧರಿಸಿ ಸದನಕ್ಕೆ ಮರಳುವಂತೆ ಪ್ರತಿಪಕ್ಷದ ಸದಸ್ಯರಿಗೆ ಮನವಿ ಮಾಡಿದರು.

"ಕೃಷಿಯ ಬಗ್ಗೆ ಚರ್ಚೆ ನಡೆಯಬೇಕಾಗಿದೆ. ದೇಶದ ಇಂತಹ ಮಹತ್ವದ ವಿಷಯವಾದ ಚರ್ಚೆಗೆ ನೀವು ಅವಕಾಶ ನೀಡುತ್ತಿಲ್ಲ. ಸಹಕರಿಸಿ ಕಲಾಪಕ್ಕೆ ಅವಕಾಶ ನೀಡಬೇಕೆಂದು ವಿಪಕ್ಷ ಸದಸ್ಯರಲ್ಲಿ ಮನವಿ ಮಾಡಿದರು. ಆದರೆ, ವಿಪಕ್ಷ ಸದಸ್ಯರು ಇದಕ್ಕೆ ಸೊಪ್ಪು ಹಾಕದಿದ್ದಾಗ ಕಲಾಪವನ್ನು ನಾಳೆಗೆ ಮುಂದೂಡಿದರು.

ಇದಕ್ಕೂ ಮುನ್ನಾ ಬೆಳಗ್ಗೆ 11 ಗಂಟೆಗೆ ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ, ಡಿಎಂಕೆ ಸದಸ್ಯರು ಘೋಷಣೆಗಳನ್ನು ಹೊಂದಿರುವ ಟಿ-ಶರ್ಟ್‌ಗಳನ್ನು ಧರಿಸಿದ್ದನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಆಕ್ಷೇಪಿಸಿದರು. ಇಂತಹ ಕ್ರಮಗಳು ಸದನದ ಕಾರ್ಯವಿಧಾನದ ನಿಯಮಗಳಿಗೆ ವಿರುದ್ಧವಾಗಿವೆ ಎಂದು ಹೇಳಿದರು

.ಡಿಎಂಕೆ ಸದಸ್ಯರು '#fairdelimitationಗೆ ತಮಿಳುನಾಡು ಹೋರಾಡುತ್ತದೆ, ತಮಿಳುನಾಡು ಗೆಲ್ಲುತ್ತದೆ ಎಂಬ ಘೋಷಣೆಗಳನ್ನು ಹೊಂದಿರುವ ಬಿಳಿ ಟಿ-ಶರ್ಟ್‌ಗಳನ್ನು ಧರಿಸಿದ್ದರು. ಸದನವು ನಿಯಮ ಮತ್ತು ಕಾರ್ಯವಿಧಾನಗಳೊಂದಿಗೆ ಕಾರ್ಯನಿರ್ವಹಿಸುತ್ತದೆ. ಸದಸ್ಯರು ಸದನದ ಘನತೆ ಮತ್ತು ಗೌರವವನ್ನು ಕಾಪಾಡಿಕೊಳ್ಳಬೇಕು. ಕೆಲವು ಸಂಸದರು ನಿಯಮಗಳನ್ನು ಪಾಲಿಸುತ್ತಿಲ್ಲ ಮತ್ತು ಘನತೆಯನ್ನು ಉಲ್ಲಂಘಿಸುತ್ತಿದ್ದಾರೆ, ಇದು ಸ್ವೀಕಾರಾರ್ಹವಲ್ಲ ಎಂದು ಲೋಕಸಭಾಧ್ಯಕ್ಷ ಓಂ ಬಿರ್ಲಾ ಹೇಳಿದರು.

ಘೋಷಣೆಗಳನ್ನು ಬರೆದ ಟಿ-ಶರ್ಟ್‌ಗಳನ್ನು ಧರಿಸಿ ಬಂದ ಸದಸ್ಯರು ಸದನದಿಂದ ಹೊರಗೆ ಹೋಗಿ ಘನತೆಯನ್ನು ಕಾಪಾಡಿಕೊಳ್ಳಲು ಸರಿಯಾದ ಉಡುಪಿನೊಂದಿಗೆ ಹಿಂತಿರುಗುವಂತೆ ಸ್ಪೀಕರ್ ನಿರ್ದೇಶಿಸಿದರು. ಡಿಎಂಕೆ ಸದಸ್ಯರು ಲೋಕಸಭೆಯಲ್ಲಿ ಗಡಿ ನಿರ್ಣಯದ ವಿಷಯವನ್ನು ಎತ್ತಲು ಪ್ರಯತ್ನಿಸುತ್ತಿದ್ದಾರೆ, ಆದರೆ ಜನಗಣತಿ ಇನ್ನೂ ನಡೆಯದ ಕಾರಣ ಈ ವಿಷಯವು ಸರ್ಕಾರದ ಗಮನದಲ್ಲಿಲ್ಲ ಎಂದು ಹೇಳಿ ಸ್ಪೀಕರ್ ಅವರ ಮನವಿಯನ್ನು ತಿರಸ್ಕರಿಸಿದರು.

opposition Protest
ಕ್ಷೇತ್ರ ಮರುವಿಂಗಡಣೆ: ಸಂಸತ್ತಿನ ಉಭಯ ಸದನಗಳಲ್ಲಿ ಗದ್ದಲ, ಮಧ್ಯಾಹ್ನ 2 ಗಂಟೆಗೆ ಕಲಾಪ ಮುಂದೂಡಿಕೆ

ರಾಜ್ಯಸಭೆಯೂ ನಾಳೆಗೆ ಮುಂದೂಡಿಕೆ: ರಾಜ್ಯಸಭೆಯೂ ಇದೇ ರೀತಿಯ ಪ್ರತಿಭಟನೆಗಳಿಗೆ ಕಾರಣವಾಯಿತು. ಪರಿಣಾಮ ರಾಜ್ಯಸಭಾಧ್ಯಕ್ಷ ಜಗದೀಪ್ ಧಂಖರ್ ಅವರು ಆರಂಭದಲ್ಲಿ ಸದನವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು. ಬಳಿಕ ಕಲಾಪ ಪುನರ್ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷದ ಸದಸ್ಯರು ತಮ್ಮ ಪಟ್ಟು ಸಡಿಲಿಸದ ಹಿನ್ನೆಲೆಯಲ್ಲಿ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com