'ಸ್ತನಗಳ ಹಿಡಿಯುವುದು, ಪ್ಯಾಂಟ್ ಎಳೆಯುವುದು ಅತ್ಯಾಚಾರ ಯತ್ನವಲ್ಲ': Allahabad High Court

ಆರೋಪಿಗಳ ವಿರುದ್ಧ ಈ ಹಿಂದೆ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು ಪೋಕ್ಸೋ ಕಾಯ್ದೆಯ ಸೆಕ್ಷನ್ 18 (ಅಪರಾಧ ಎಸಗುವ ಪ್ರಯತ್ನ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
Allahabad High Court
ಅಲಹಾಬಾದ್ ಕೋರ್ಟ್
Updated on

ಲಖನೌ: ಸಂತ್ರಸ್ತೆಯ ಸ್ತನಗಳನ್ನು ಹಿಡಿಯುವುದು, ಆಕೆಯ ಪೈಜಾಮ ದಾರ ಅಥವಾ ಪ್ಯಾಂಟ್ ಎಳೆಯುವುದು ಅತ್ಯಾಚಾರ ಅಥವಾ ಅತ್ಯಾಚಾರ ಯತ್ನ ಆಗುವುದಿಲ್ಲ.. ಎಂದು ಅಲಹಾಬಾದ್ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಅತ್ಯಾಚಾರ ಯತ್ನಕ್ಕೆ ಸಂಬಂಧಿಸಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಕೋರ್ಟ್ ಈ ಮಹತ್ವದ ತೀರ್ಪು ನೀಡಿದ್ದು, ಸಂತ್ರಸ್ತೆಯ ಸ್ತನಗಳನ್ನು ಹಿಡಿಯುವುದು, ಆಕೆಯ ಪೈಜಾಮ ದಾರ ಅಥವಾ ಪ್ಯಾಂಟ್ ಎಳೆಯುವುದು ಅತ್ಯಾಚಾರ ಅಥವಾ ಅತ್ಯಾಚಾರ ಯತ್ನ ಆಗುವುದಿಲ್ಲ.. ಬದಲಿಗೆ ಅದು ತೀವ್ರ ಲೈಂಗಿಕ ದೌರ್ಜನ್ಯವಾಗುತ್ತದೆ ಎಂದು ಹೇಳಿದೆ.

ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯ ಪಟಿಯಾಲಿ ಪೊಲೀಸ್ ಠಾಣೆ ಪ್ರದೇಶಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ನ್ಯಾಯಮೂರ್ತಿ ರಾಮ್ ಮನೋಹರ್ ನಾರಾಯಣ್ ಮಿಶ್ರಾ ಅವರ ಪೀಠವು, ಸಂತ್ರಸ್ತೆಯ ಸ್ತನಗಳನ್ನು ಹಿಡಿಯುವುದು, ಆಕೆಯ ಪೈಜಾಮದ ದಾರವನ್ನು ಕತ್ತರಿಸಿ ಅದನ್ನು ಎಳೆಯಲು ಪ್ರಯತ್ನಿಸುವುದು ಅತ್ಯಾಚಾರ ಅಥವಾ ಅತ್ಯಾಚಾರ ಯತ್ನವಾಗುವುದಿಲ್ಲ. ಇದು ಗಂಭೀರ ಲೈಂಗಿಕ ದೌರ್ಜನ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.

Allahabad High Court
Yuzvendra Chahal-Dhanashree Verma ವಿಚ್ಛೇದನ; ಜೀವನಾಂಶ 60 ಕೋಟಿ ರೂ ಅಲ್ಲ.. ಮತ್ತೆಷ್ಟು?

ಆರೋಪಿಗಳ ವಿರುದ್ಧ ಈ ಹಿಂದೆ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು ಪೋಕ್ಸೋ ಕಾಯ್ದೆಯ ಸೆಕ್ಷನ್ 18 (ಅಪರಾಧ ಎಸಗುವ ಪ್ರಯತ್ನ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಅಲಹಾಬಾದ್ ಹೈಕೋರ್ಟ್ ಆರೋಪಿಗಳ ವಿರುದ್ಧದ ಆರೋಪಗಳನ್ನು ತಿದ್ದುಪಡಿ ಮಾಡಿದ್ದು, ಆರೋಪಗಳನ್ನು ಹೊಸ ದೃಷ್ಟಿಕೋನದಿಂದ ನೋಡಿದೆ. ಈ ಪ್ರಕರಣದಲ್ಲಿ ಅತ್ಯಾಚಾರ ಯತ್ನದ ಆರೋಪ ನಿಲ್ಲುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

ಆರೋಪಿಗಳ ವಿರುದ್ಧ ಹೊರಿಸಲಾದ ಆರೋಪಗಳು ಮತ್ತು ಪ್ರಕರಣದ ಸತ್ಯಗಳ ಆಧಾರದ ಮೇಲೆ, ಅತ್ಯಾಚಾರಕ್ಕೆ ಯತ್ನ ನಡೆದಿದೆ ಎಂದು ಸಾಬೀತುಪಡಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ರಾಮ್ ಮನೋಹರ್ ನಾರಾಯಣ್ ಮಿಶ್ರಾ ಅವರ ಪೀಠ ಹೇಳಿದೆ. ಇದಕ್ಕಾಗಿ, ಆರೋಪಿಯ ಕ್ರಮಗಳು ಅಪರಾಧ ಮಾಡಲು ಸಿದ್ಧತೆಯನ್ನು ಮೀರಿವೆ ಎಂಬುದನ್ನು ಪ್ರಾಸಿಕ್ಯೂಷನ್ ಸಾಬೀತುಪಡಿಸಬೇಕಾಗಿತ್ತು. ಅತ್ಯಾಚಾರ ಯತ್ನ ಮತ್ತು ಅಪರಾಧಕ್ಕೆ ಸಿದ್ಧತೆ ನಡುವಿನ ವ್ಯತ್ಯಾಸವನ್ನು ಸರಿಯಾಗಿ ಅರ್ಥಮಾಡಿಕೊಳ್ಳಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

Allahabad High Court
Nagpur violence: ಮಹಿಳಾ ಪೊಲೀಸ್ ಮೈ ಮುಟ್ಟಿ ವಿವಸ್ತ್ರಗೊಳಿಸಲು ಗಲಭೆಕೋರರ ಯತ್ನ; ಸ್ಥಳೀಯ ನಾಯಕನ ಬಂಧನ!

ಏನಿದು ಪ್ರಕರಣ?

ಕಾಸ್ಗಂಜ್ ಜಿಲ್ಲೆಯ ಪಟಿಯಾಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದ್ದು, ಪವನ್ ಮತ್ತು ಆಕಾಶ್ 11 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಮಯದಲ್ಲಿ, ಆಕಾಶ್ ಬಲಿಪಶುವಿನ ಪೈಜಾಮಾದ ದಾರ ಕತ್ತರಿಸಿ ಎಳೆಯಲು ಪ್ರಯತ್ನಿಸಿದನು. ಆದರೆ, ಈ ವೇಳೆ ದಾರಿಹೋಕರು ಬರುತ್ತಿದ್ದಂತೆಯೇ ಅವರು ಅಲ್ಲಿಂದ ಪರಾರಿಯಾಗಿದ್ದರು. ಇಬ್ಬರ ವಿರುದ್ಧ ಅಂದು ಪೊಲೀಸ್ ದೂರು ದಾಖಲಾಗಿತ್ತು.

ಅದರಂತೆ ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ಅತ್ಯಾಚಾರ ಯತ್ನ ಮತ್ತು ಲೈಂಗಿಕ ದೌರ್ಜನ್ಯದ ಪ್ರಕರಣವೆಂದು ಪರಿಗಣಿಸಿ ವಿಚಾರಣಾ ನ್ಯಾಯಾಲಯವು ಸಮನ್ಸ್ ಹೊರಡಿಸಿತ್ತು. ಆದರೆ, ಆರೋಪಿಗಳು ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಪರಿಷ್ಕರಣಾ ಅರ್ಜಿಯನ್ನು ಸಲ್ಲಿಸಿದರು, ದೂರಿನ ಆಧಾರದ ಮೇಲೆ ಪ್ರಕರಣವು ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಬರುವುದಿಲ್ಲ ಮತ್ತು ಸೆಕ್ಷನ್ 354 (ಬಿ) ಐಪಿಸಿ ಮತ್ತು ಪೋಕ್ಸೊ ಕಾಯ್ದೆಯ ಅಡಿಯಲ್ಲಿ ಮಾತ್ರ ಬರಬಹುದು ಎಂದು ವಾದಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com