KT Rama Rao
ಕೆಟಿ ರಾಮರಾವ್

ಕ್ಷೇತ್ರ ಪುನರ್ ವಿಂಗಡಣೆ: ದಕ್ಷಿಣ ಭಾರತಕ್ಕೆ ಘೋರ ಅನ್ಯಾಯ- ಕೆ.ಟಿ ರಾಮರಾವ್

ಈ ಸಮಸ್ಯೆಯನ್ನು ಕೂಡಲೇ ಬಗೆಹರಿಸದಿದ್ದರೆ ದೀರ್ಘಾವಧಿಯ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಮುಂದಿನ ಪೀಳಿಗೆ ಈಗಿನ ನಾಯಕರ ಮೌನವನ್ನು ಕ್ಷಮಿಸುವುದಿಲ್ಲ
Published on

ಹೈದರಾಬಾದ್: ಕೇಂದ್ರ ಸರ್ಕಾರದ ಉದ್ದೇಶಿತ ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆಯನ್ನು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಕಾರ್ಯಾಧ್ಯಕ್ಷ ಕೆಟಿ ರಾಮರಾವ್ ಬಲವಾಗಿ ಖಂಡಿಸಿದ್ದಾರೆ. ಇದು ದಕ್ಷಿಣದ ರಾಜ್ಯಗಳಿಗೆ ರಾಜಕೀಯ ಪ್ರಾತಿನಿಧ್ಯವನ್ನು ಗಮನಾರ್ಹವಾಗಿ ಕಡಿಮೆ ಮಾಡಲಿದ್ದು, ಅನ್ಯಾಯವಾದ ಕ್ರಮವಾಗಿದೆ ಎಂದಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕರೆದಿರುವ ದಕ್ಷಿಣ ಪ್ರಾದೇಶಿಕ ಪಕ್ಷಗಳ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳಲು ಚೆನ್ನೈಗೆ ಆಗಮಿಸಿದ ಕೆಟಿಆರ್, ಈ ಸಮಸ್ಯೆಯನ್ನು ಕೂಡಲೇ ಬಗೆಹರಿಸದಿದ್ದರೆ ದೀರ್ಘಾವಧಿಯ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಮುಂದಿನ ಪೀಳಿಗೆ ಈಗಿನ ನಾಯಕರ ಮೌನವನ್ನು ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದರು.

ಕ್ಷೇತ್ರ ಪುನರ್ ವಿಂಗಡಣೆ ತೀವ್ರ ಪ್ರಾದೇಶಿಕ ಅಸಮಾನತೆಗಳನ್ನು ಸೃಷ್ಟಿಸುತ್ತದೆ.ರಾಷ್ಟ್ರೀಯ ನೀತಿ ನಿರೂಪಣೆಯಲ್ಲಿ ದಕ್ಷಿಣ ಭಾರತದ ರಾಜ್ಯಗಳ ಧ್ವನಿಯನ್ನು ದುರ್ಬಲಗೊಳಿಸುತ್ತದೆ ಮತ್ತು ಕೇಂದ್ರ ನಿಧಿಯನ್ನು ಕಡಿಮೆ ಮಾಡುತ್ತದೆ ಎಂದು ಒತ್ತಿ ಹೇಳಿದರು.

ತೆಲಂಗಾಣ, ತಮಿಳುನಾಡು, ಕರ್ನಾಟಕ, ಕೇರಳ ಮತ್ತು ಆಂಧ್ರಪ್ರದೇಶದಂತಹ ರಾಜ್ಯಗಳು ಆರ್ಥಿಕ ಬೆಳವಣಿಗೆ, ಕೈಗಾರಿಕೀಕರಣ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿವೆ ಆದರೆ, ಕ್ಷೇತ್ರ ಪುನರ್ ವಿಂಗಡಣೆ

ದಕ್ಷಿಣ ಭಾರತದ ರಾಜಕೀಯ ಪ್ರಾತಿನಿಧ್ಯವನ್ನು ಕಡಿಮೆ ಮಾಡುತ್ತದೆ. ಪ್ರಾದೇಶಿಕ ಅಸಮತೋಲನವನ್ನು ಹೆಚ್ಚಿಸುತ್ತದೆ. ರಾಷ್ಟ್ರ ಮಟ್ಟದಲ್ಲಿ ನಿರ್ಧಾರ ತೆಗೆದುಕೊಳ್ಳುವುದರಿಂದ ದಕ್ಷಿಣದ ರಾಜ್ಯಗಳನ್ನು ಮತ್ತಷ್ಟು ದೂರ ತಳ್ಳುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

KT Rama Rao
ಕ್ಷೇತ್ರ ಪುನರ್ ವಿಂಗಡಣೆ: ಏನೇ ಆಗಲಿ, ನಮ್ಮ ಸ್ಥಾನಗಳ ಸಂಖ್ಯೆ ಕಡಿಮೆಯಾಗಲು ಬಿಡಲ್ಲ: ಡಿ.ಕೆ ಶಿವಕುಮಾರ್

ತಮಿಳುನಾಡು, ಕರ್ನಾಟಕ ಮತ್ತು ಕೇರಳ ಸೇರಿದಂತೆ ಹಲವಾರು ಪ್ರಾದೇಶಿಕ ಪಕ್ಷಗಳು ಈಗಾಗಲೇ ಕ್ಷೇತ್ರ ಪುನರ್ ವಿಂಗಡಣೆ ಕಾರ್ಯಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿವೆ.

X

Advertisement

X
Kannada Prabha
www.kannadaprabha.com