
ಹೈದರಾಬಾದ್: ಶನಿವಾರ ಹಯಾತ್‌ನಗರದಲ್ಲಿ ಬಸ್ ಡಿಕ್ಕಿ ಹೊಡೆದು 57 ವರ್ಷದ ಪೊಲೀಸ್ ಅಧಿಕಾರಿಯೊಬ್ಬರು ಸಾವಿಗೀಡಾಗಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿಎಂ ನಂದೀಶ್ವರ ಬಾಬ್ಜಿ ಅವರು ಬೆಳಿಗ್ಗೆ 4.40ಕ್ಕೆ ವಾಕಿಂಗ್‌ಗೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ.
ಬಾಬ್ಜಿ ಅವರು ರಸ್ತೆ ದಾಟುತ್ತಿದ್ದಾಗ ಆಂಧ್ರ ಪ್ರದೇಶದ ಆರ್‌ಟಿಸಿ ಬಸ್ ಅವರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಬಾಬ್ಜಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹಯಾತ್‌ನಗರ ಪೊಲೀಸರು ತಿಳಿಸಿದ್ದಾರೆ.
ಅಬ್ದುಲ್ಲಾಪುರ್ಮೆಟ್‌ನಿಂದ ಹಯಾತ್ ನಗರಕ್ಕೆ ಪ್ರಯಾಣಿಸುತ್ತಿದ್ದ ಬಸ್ ಅನ್ನು ಚಾಲಕ ಅತಿ ವೇಗದಲ್ಲಿ ಮತ್ತು ನಿರ್ಲಕ್ಷ್ಯದಿಂದ ಚಲಾಯಿಸುತ್ತಿದ್ದರು ಎಂದು ಪ್ರಾಥಮಿಕ ತನಿಖೆಗಳು ಸೂಚಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೆಚ್ಚುವರಿ ಎಸ್ಪಿ ಅವರನ್ನು ಹೈದರಾಬಾದ್‌ನ ಡಿಜಿಪಿ ಕಚೇರಿಯಲ್ಲಿ ನಿಯೋಜಿಸಲಾಗಿತ್ತು. ಸದ್ಯ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
Advertisement