
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಅರಣ್ಯ ಪ್ರದೇಶದಿಂದ ನುಸುಳಲು ನುಸುಳುಕೋರರು ಯತ್ನಿಸಿದ್ದು, ಭದ್ರತಾ ಪಡೆಗಳು- ನುಸುಳುಕೋರರ ನಡಿವೆ ಗುಂಡಿನ ಚಕಮಕಿ ನಡೆದಿದೆ.
ಹಿರಾನಗರ ವಲಯದ ಅಂತರರಾಷ್ಟ್ರೀಯ ಗಡಿಯ ಬಳಿಯ ಸನ್ಯಾಲ್ ಗ್ರಾಮದಲ್ಲಿ ಶಂಕಿತ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಬಂದ ನಂತರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗ ಎನ್‌ಕೌಂಟರ್ ಪ್ರಾರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳಕ್ಕೆ ಸೇನಾ ಪಡೆಗಳನ್ನು ರವಾನಿಸಲಾಗಿದೆ ಮತ್ತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಜಮ್ಮುವಿನಲ್ಲಿ ಇತ್ತೀಚೆಗೆ ಭಯೋತ್ಪಾದಕರ ಸರಣಿ ಒಳನುಸುಳುವಿಕೆ ನಡೆಯುತ್ತಿದೆ. ಮಾರ್ಚ್ 17 ರಂದು, ಕುಪ್ವಾರಾ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದು, ಒಬ್ಬ ಪಾಕಿಸ್ತಾನಿ ಭಯೋತ್ಪಾದಕ ಸಾವನ್ನಪ್ಪಿದ್ದಾನೆ.
ಇತ್ತೀಚೆಗೆ, ಕಥುವಾ ಜಿಲ್ಲೆಯಲ್ಲಿ ಭಯೋತ್ಪಾದಕರು ಮೂವರು ಅಮಾಯಕ ನಾಗರಿಕರನ್ನು ಕೊಂದರು. ಅವರಲ್ಲಿ ಒಬ್ಬ 14 ವರ್ಷದ ಬಾಲಕನೂ ಇದ್ದ.
Advertisement