ಕೇರಳ: ಬಿಜೆಪಿ ಕಾರ್ಯಕರ್ತನ ಹತ್ಯೆ; ಎಂಟು CPI(M)ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ

ಬಿಜೆಪಿ ಕಾರ್ಯಕರ್ತ ಎಳಂಬಿಲಾಯಿ ಸೂರಜ್ ಹತ್ಯೆ ಪ್ರಕರಣದಲ್ಲಿ ಒಂಬತ್ತು ಸಿಪಿಐ(ಎಂ) ಕಾರ್ಯಕರ್ತರು ತಪ್ಪಿತಸ್ಥರೆಂದು ತಲಶ್ಶೇರಿ ಪ್ರಧಾನ ಸೆಷನ್ಸ್ ನ್ಯಾಯಾಧೀಶ ಕೆ ಟಿ ನಿಸಾರ್ ಅಹಮ್ಮದ್ ಶುಕ್ರವಾರ ತೀರ್ಪು ನೀಡಿದ್ದಾರೆ.
CPI (M) Casual Images
ಸಿಪಿಐ(ಎಂ) ಸಾಂದರ್ಭಿಕ ಚಿತ್ರ
Updated on

ಕಣ್ಣೂರು: ಸುಮಾರು ಎರಡು ದಶಕಗಳ ಹಿಂದೆ ಕೇರಳದ ಕಣ್ಣೂರಿನಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಸಿಪಿಐ(ಎಂ) ಕಾರ್ಯಕರ್ತರಿಗೆ ಕೇರಳದ ನ್ಯಾಯಾಲಯ ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ಬಿಜೆಪಿ ಕಾರ್ಯಕರ್ತ ಎಳಂಬಿಲಾಯಿ ಸೂರಜ್ ಹತ್ಯೆ ಪ್ರಕರಣದಲ್ಲಿ ಒಂಬತ್ತು ಸಿಪಿಐ(ಎಂ) ಕಾರ್ಯಕರ್ತರು ತಪ್ಪಿತಸ್ಥರೆಂದು ತಲಶ್ಶೇರಿ ಪ್ರಧಾನ ಸೆಷನ್ಸ್ ನ್ಯಾಯಾಧೀಶ ಕೆ ಟಿ ನಿಸಾರ್ ಅಹಮ್ಮದ್ ಶುಕ್ರವಾರ ತೀರ್ಪು ನೀಡಿದ್ದಾರೆ.

ಎಂಟು ಜನರಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 50,000 ರೂ. ದಂಡ ವಿಧಿಸಿದರೆ, ಮತ್ತೊಬ್ಬ ಅಪರಾಧಿಗೆ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಲಾಗಿದೆ. ಸಿಪಿಐ(ಎಂ) ತೊರೆದು ಬಿಜೆಪಿ ಸೇರಿದ ನಂತರ ರಾಜಕೀಯ ವೈಷಮ್ಯದಿಂದಾಗಿ ಸೂರಜ್‌ನನ್ನು ಕೊಲೆ ಮಾಡಲಾಗಿದೆ ಎಂದು ಪ್ರಾಸಿಕ್ಯೂಷನ್ ಹೇಳಿದೆ.

2012ರಲ್ಲಿ ನಡೆದಿದ್ದ ಟಿಪಿ ಚಂದ್ರಶೇಖರನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲಿ ಬಂಧನಕ್ಕೊಳಗಾದ ರಾಜೀಶ್ ಪೊಲೀಸರಿಗೆ ನೀಡಿದ ಹೇಳಿಕೆಯನ್ನು ಆಧರಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ರಾಜೀಶ್ ಮತ್ತು ಪಿ ಎಂ ಮನೋರಾಜ್ ಅವರನ್ನು ಪ್ರಕರಣದಲ್ಲಿ ಹೆಸರಿಸಲಾಗಿದೆ.

CPI (M) Casual Images
ಕೇರಳ: ತುಷಾರ್ ಗಾಂಧಿ ವಿರುದ್ಧ ಪ್ರತಿಭಟನೆ; BJP-RSS ಕಾರ್ಯಕರ್ತರ ಮೇಲೆ ಕೇಸ್ ದಾಖಲು

ಮನೋರಾಜ್ ಕೇರಳ ಮುಖ್ಯಮಂತ್ರಿಗಳ ಪತ್ರಿಕಾ ಕಾರ್ಯದರ್ಶಿ ಪಿ ಎಂ ಮನೋಜ್ ಅವರ ಸಹೋದರ. ಆಗಸ್ಟ್ 7, 2005 ರಂದು ಬೆಳಿಗ್ಗೆ 8.40 ಕ್ಕೆ ಮುಜಪ್ಪಿಲಂಗಾಡ್ ಟೆಲಿಫೋನ್ ಎಕ್ಸ್‌ಚೇಂಜ್ ಮುಂದೆ ಆಟೋರಿಕ್ಷಾದಲ್ಲಿ ಬಂದ ಗುಂಪೊಂದು ಸೂರಜ್‌ನನ್ನು ಹತ್ಯೆ ಮಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com