
ಅಲ್ಲಾಹಾಬಾದ್: ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಿದ ಬೆನ್ನಲ್ಲೇ ಅಲಹಾಬಾದ್ ಹೈಕೋರ್ಟ್ ಬಾರ್ ಅಸೋಸಿಯೇಷನ್‌ನಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿದೆ.
ವಕೀಲರು ಮಾರ್ಚ್ 25 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ ಎಂದು ಸಂಸ್ಥೆಯ ಹಿರಿಯ ಪದಾಧಿಕಾರಿಯೊಬ್ಬರು ಸೋಮವಾರ ಸ್ಪಷ್ಟಪಡಿಸಿದ್ದಾರೆ.
"ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ ಅಲಹಾಬಾದ್ ಹೈಕೋರ್ಟ್ ಬಾರ್ ಅಸೋಸಿಯೇಷನ್‌ನ ವಕೀಲರು ಮಂಗಳವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ" ಎಂದು ಬಾರ್ ಬಾಡಿ ಅಧ್ಯಕ್ಷ ಅನಿಲ್ ತಿವಾರಿ ಹೇಳಿದ್ದಾರೆ.
"ಈ ಸಂಬಂಧ ನಾವು ಲಕ್ನೋದಲ್ಲಿರುವ ಬಾರ್ ಅಸೋಸಿಯೇಷನ್‌ಗಳಿಗೆ ವಿನಂತಿಯನ್ನು ಕಳುಹಿಸುತ್ತಿದ್ದೇವೆ" ಎಂದು ಅವರು ತಿಳಿಸಿದ್ದಾರೆ.
ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಅವರ ಅಧಿಕೃತ ನಿವಾಸದಿಂದ ಭಾರಿ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ವಿಚಾರಣೆ ಎದುರಿಸುತ್ತಿರುವ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲು ಶಿಫಾರಸು ಮಾಡುವ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಸೋಮವಾರ ದೃಢಪಡಿಸಿದ ನಂತರ ಮುಷ್ಕರಕ್ಕೆ ಕರೆ ನೀಡಲಾಗಿದೆ.
Advertisement