ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹನಿಟ್ರ್ಯಾಪ್ ಪ್ರಕರಣ: ಇಂದು ಅಥವಾ ನಾಳೆ ವಿಚಾರಣೆ

ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ವಿಧಾನಸಭೆ ಅಧಿವೇಶನದಲ್ಲಿ ಹನಿಟ್ರ್ಯಾಪ್​ನಲ್ಲಿ ತಮ್ಮನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಹೇಳಿಕೆ ನೀಡಿ ವಿವಾದ ಭುಗಿಲೆದ್ದಿತ್ತು.
Supreme court
ಸುಪ್ರೀಂ ಕೋರ್ಟ್
Updated on

ನವದೆಹಲಿ: ಕರ್ನಾಟಕ ಸರ್ಕಾರದ ಸಚಿವರ ಮೇಲೆ ನಡೆದಿದೆ ಎನ್ನಲಾದ ಹನಿ ಟ್ರ್ಯಾಪಿಂಗ್ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಪ್ರಕರಣದ ವಿಚಾರಣೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗೆ ಮನವಿ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ನ್ಯಾಯಮೂರ್ತಿ ಹೆಸರಿರುವುದನ್ನು ಅರ್ಜಿದಾರರು ಪತ್ತೆಹಚ್ಚಿದ್ದು, ಪ್ರಕರಣ ಕೈಗೆತ್ತಿಕೊಳ್ಳಲು ಒಪ್ಪಿಕೊಂಡಿದ್ದಾರೆ.

ರಾಜ್ಯದಲ್ಲಿ ಹಿರಿಯ ಸಚಿವರು, ಶಾಸಕರು, ರಾಜಕೀಯ ಮುಖಂಡರು ಮತ್ತು ನ್ಯಾಯಮೂರ್ತಿಗಳು ಸೇರಿದಂತೆ 48 ಜನರನ್ನು ಗುರಿಯಾಗಿಟ್ಟುಕೊಂಡು ಹನಿಟ್ರ್ಯಾಪ್ ಪ್ರಕರಣ ನಡೆದಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಯಲ್ಲಿ ಉಲ್ಲೇಖಿಸಲಾಗಿದ್ದು, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠಕ್ಕೆ ಅರ್ಜಿ ಸಲ್ಲಿಸಲಾಗಿದೆ. ಇಂದು ಅಥವಾ ನಾಳೆ ವಿಚಾರಣೆ ನಡೆಯುವ ಸಾಧ್ಯತೆಯಿದೆ.

ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ವಿಧಾನಸಭೆ ಅಧಿವೇಶನದಲ್ಲಿ ಹನಿಟ್ರ್ಯಾಪ್​ನಲ್ಲಿ ತಮ್ಮನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಹೇಳಿಕೆ ನೀಡಿ ವಿವಾದ ಭುಗಿಲೆದ್ದಿತ್ತು. ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನಗೊಂಡಿದ್ದಾರೆ ಎಂಬ ಮಾಹಿತಿ ಕೂಡ ಕೇಳಿಬಂದಿತ್ತು.

Supreme court
ದೆಹಲಿ ಹೈಕೋರ್ಟ್ ಜಡ್ಜ್ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆ: ತನಿಖಾ ವರದಿ ಬಹಿರಂಗಪಡಿಸಿದ ಸುಪ್ರೀಂ ಕೋರ್ಟ್

ವಿರೋಧ ಪಕ್ಷದ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ನಡೆಸಲಾಗುತ್ತಿದೆ ಎನ್ನಲಾದ ಹನಿ-ಟ್ರ್ಯಾಪ್ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು, ಸಿಬಿಐ ಅಥವಾ ಹಾಲಿ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ತನಿಖೆ ವಹಿಸಬೇಕೆಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಸದನದಲ್ಲಿಯೇ ಹೇಳಿಕೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಒಂದು ವೇಳೆ ಹನಿಟ್ರ್ಯಾಪ್ ಪ್ರಕರಣದಲ್ಲಿ ಯಾರೇ ಭಾಗಿಯಾಗಿರುವುದು ದೃಢಪಟ್ಟರೆ ಅವರನ್ನು ಶಿಕ್ಷಿಸದೆ ಬಿಡುವುದಿಲ್ಲ. ಈ ವಿಷಯದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com