ಕಂತೆ ಕಂತೆ ಹಣ ಪತ್ತೆ ಪ್ರಕರಣ: ನ್ಯಾ. ಯಶವಂತ್ ವರ್ಮಾ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ

ಮಾರ್ಚ್ 20 ಮತ್ತು ಇಂದು ನಡೆದ ಕೊಲಿಜಿಯಂ ಸಭೆಗಳಲ್ಲಿ ನ್ಯಾ. ಯಶವಂತ್ ವರ್ಮಾ ಅವರನ್ನು ಅಲಹಾಬಾದ್‌ ಹೈಕೋರ್ಟ್ ಆಫ್ ಜ್ಯುಡಿಕೇಚರ್‌ಗೆ ವಾಪಸ್ ಕಳುಹಿಸಲು ಶಿಫಾರಸು ಮಾಡಲಾಗಿದೆ.
ನ್ಯಾ. ಯಶವಂತ್ ವರ್ಮಾ
ನ್ಯಾ. ಯಶವಂತ್ ವರ್ಮಾ
Updated on

ನವದೆಹಲಿ: ದೆಹಲಿ ಹೈಕೋರ್ಟ್‌ ನ್ಯಾಯಾಧೀಶರಾದ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆಯಾದ ಬೆನ್ನಲ್ಲೇ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.

ಮಾರ್ಚ್ 20 ಮತ್ತು ಇಂದು ನಡೆದ ಕೊಲಿಜಿಯಂ ಸಭೆಗಳಲ್ಲಿ ನ್ಯಾ. ಯಶವಂತ್ ವರ್ಮಾ ಅವರನ್ನು ಅಲಹಾಬಾದ್‌ ಹೈಕೋರ್ಟ್ ಆಫ್ ಜ್ಯುಡಿಕೇಚರ್‌ಗೆ ವಾಪಸ್ ಕಳುಹಿಸಲು ಶಿಫಾರಸು ಮಾಡಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಬೆಂಕಿ ಅವಘಡದ ನಂತರ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಭಾರಿ ಪ್ರಮಾಣದ ನಗದು ಪತ್ತೆಯಾದ ನಂತರ ಅವರನ್ನು ಬಂಧಿಸಲಾಗಿತ್ತು. ಇಂದು ದೆಹಲಿ ಹೈಕೋರ್ಟ್, ಯಶವಂತ್ ವರ್ಮಾ ಅವರು ಯಾವುದೇ ನ್ಯಾಯಾಂಗ ಕೆಲಸಗಳನ್ನು ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿತ್ತು.

ನ್ಯಾ. ಯಶವಂತ್ ವರ್ಮಾ
ಕಂತೆ ಕಂತೆ ಹಣ ಪತ್ತೆ ಪ್ರಕರಣ: ನ್ಯಾ. ಯಶವಂತ್ ವರ್ಮಾ ನ್ಯಾಯಾಂಗ ಕರ್ತವ್ಯ ನಿರ್ವಹಿಸದಂತೆ ಹೈಕೋರ್ಟ್ ಆದೇಶ

ನ್ಯಾ. ಯಶವಂತ್ ವರ್ಮಾ ವಿರುದ್ಧದ ಆರೋಪಗಳ ತನಿಖೆಗೆ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಜಿ.ಎಸ್. ಸಂಧವಾಲಿಯಾ ಮತ್ತು ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶೆ ಅನು ಶಿವರಾಮನ್ ಅವರನ್ನು ಒಳಗೊಂಡ ಮೂವರು ಸದಸ್ಯರ ಸಮಿತಿಯನ್ನು ರಚಿಸಿದ್ದರು.

ನ್ಯಾಯಮೂರ್ತಿ ಉಪಾಧ್ಯಾಯ ಅವರು ಹಣ ಪತ್ತೆ ಬಗ್ಗೆ ವರದಿ ನೀಡಿದ್ದು, "ನಾಲ್ಕರಿಂದ ಐದು ಅರೆ ಸುಟ್ಟ ನೋಟುಗಳ ಚೀಲಗಳು" ನ್ಯಾಯಾಧೀಶರ ಲುಟಿಯೆನ್ಸ್ ಮನೆಯಲ್ಲಿ ಪತ್ತೆಯಾಗಿವೆ ಎಂದು ಹೇಳಿದ್ದರು.

ನ್ಯಾಯಮೂರ್ತಿ ವರ್ಮಾ ಅವರು ನಗದು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಗಳನ್ನು ಬಲವಾಗಿ ತಳ್ಳಿಹಾಕಿದ್ದಾರೆ ಮತ್ತು ಈ ಹಣವು ತಮಗೆ ಅಥವಾ ತಮ್ಮ ಕುಟುಂಬದ ಸದಸ್ಯರಿಗೆ ಸೇರಿಲ್ಲ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com