
ನಾಗ್ಪುರ: ನಾಗ್ಪುರದಲ್ಲಿ ಬಾಲಿವುಡ್ ನಟ ಸೋನು ಸೂದ್ ಅವರ ಪತ್ನಿ ಸೋನಾಲಿ ಮತ್ತು ಇತರ ಇಬ್ಬರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮೂವರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಸೋಮವಾರ ರಾತ್ರಿ 10.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಸೋನಾಲಿ ಸೂದ್ ತನ್ನ ಸಹೋದರಿ ಮತ್ತು ಸೋದರಳಿಯನೊಂದಿಗೆ ಪ್ರಯಾಣಿಸುತ್ತಿದ್ದ ಕಾರು ನಗರದ ವಾರ್ಧಾ ರಸ್ತೆ ವಯಾಡಕ್ಟ್ ಸೇತುವೆಯ ಮೇಲೆ ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಅವರು ತಿಳಿಸಿದ್ದಾರೆ.
ಗಾಯಾಳುಗಳನ್ನು ನಾಗ್ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಸೋನು ಸೂದ್ ಅವರು ಆಗಮಿಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.
Advertisement