
ನವದೆಹಲಿ: ತಮಿಳುನಾಡು ಮತ್ತು ಇತರ ರಾಜ್ಯಗಳಿಗೆ ನರೇಗಾ ಯೋಜನೆಯ ಬಾಕಿ ಹಣ ಬಿಡುಗಡೆ ಮಾಡುವ ಬಗ್ಗೆ ವಿರೋಧ ಪಕ್ಷದ ಸದಸ್ಯರು ತೀವ್ರ ಗದ್ದಲ, ಕೋಲಾಹಲ ಎಬ್ಬಿಸಿದ್ದರಿಂದ ಇಂದು ಮಂಗಳವಾರ ಲೋಕಸಭೆ ಕಲಾಪವನ್ನು ಕೆಲ ಹೊತ್ತು ಮುಂದೂಡಲಾಯಿತು.
ತಮಿಳುನಾಡು, ಕೇರಳ ಮತ್ತು ಪಶ್ಚಿಮ ಬಂಗಾಳಕ್ಕೆ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(MGNREGA) ಬಾಕಿ ಹಣ ಬಿಡುಗಡೆ ಮಾಡುವ ಬಗ್ಗೆ ಗ್ರಾಮೀಣಾಭಿವೃದ್ಧಿ ಖಾತೆ ರಾಜ್ಯ ಸಚಿವ ಚಂದ್ರಶೇಖರ್ ಪೆಮ್ಮಸಾನಿ ಅವರ ಪ್ರತಿಕ್ರಿಯೆಯಿಂದ ವಿರೋಧ ಪಕ್ಷದ ಸಂಸದರು ಅತೃಪ್ತರಾಗಿದ್ದರು.
ಡಿಎಂಕೆ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ನಂತರ ಕೆಲವು ತೃಣಮೂಲ ಕಾಂಗ್ರೆಸ್ ಸಂಸದರು ಸದನದ ಬಾವಿಗಿಳಿದರು.
ಸ್ಪೀಕರ್ ಓಂ ಬಿರ್ಲಾ ಅವರು ಸದಸ್ಯರನ್ನು ತಮ್ಮ ಸ್ಥಾನಗಳಿಗೆ ಹಿಂತಿರುಗುವಂತೆ ಒತ್ತಾಯಿಸಿದರೂ ಕೇಳದಿದ್ದಾಗ ಸದನವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಲಾಯಿತು.
Advertisement