'ಸ್ತನಗಳ ಹಿಡಿಯುವುದು ಅತ್ಯಾಚಾರ ಯತ್ನವಲ್ಲ': ಅಲಹಾಬಾದ್ ಹೈಕೋರ್ಟ್‌ ತೀರ್ಪು ಬಗ್ಗೆ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ಕೇಸು ದಾಖಲು

ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ನ್ಯಾಯಪೀಠವು ಈ ವಿಚಾರದ ಬಗ್ಗೆ ವಿಚಾರಣೆ ನಡೆಸಲಿದೆ.
Supreme court
ಸುಪ್ರೀಂ ಕೋರ್ಟ್
Updated on

ನವದೆಹಲಿ: ಸ್ತನಗಳನ್ನು ಹಿಡಿಯುವುದು, ಪ್ಯಾಂಟ್ ಎಳೆಯುವುದು ಅತ್ಯಾಚಾರ ಯತ್ನವಲ್ಲ ಎಂಬ ಅಲಹಾಬಾದ್ ಹೈಕೋರ್ಟ್ ನ ವಿವಾದಾತ್ಮಕ ತೀರ್ಪಿನ ಬಗ್ಗೆ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣವನ್ನು ಕೈಗೆತ್ತಿಕೊಂಡಿದೆ.

ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ನ್ಯಾಯಪೀಠವು ಈ ವಿಚಾರದ ಬಗ್ಗೆ ವಿಚಾರಣೆ ನಡೆಸಲಿದೆ.

ಅತ್ಯಾಚಾರ ಆರೋಪಕ್ಕೆ ಕಾರಣವೇನು ಎಂಬುದರ ಕುರಿತು ಅಲಹಾಬಾದ್ ಹೈಕೋರ್ಟ್‌ನ ಅಭಿಪ್ರಾಯವನ್ನು ಕಾನೂನು ತಜ್ಞರು ಖಂಡಿಸಿದ್ದಾರೆ, ನ್ಯಾಯಾಧೀಶರು ನಿರ್ಬಂಧ ಹೇರಬೇಕೆಂದು ಮತ್ತು ಅಂತಹ ಹೇಳಿಕೆಗಳಿಂದಾಗಿ ನ್ಯಾಯಾಂಗದ ಮೇಲಿನ ಸಾರ್ವಜನಿಕ ವಿಶ್ವಾಸ ಕುಸಿಯುವುದನ್ನು ಒತ್ತಿ ಹೇಳಿದ್ದಾರೆ.

Supreme court
'ಸ್ತನಗಳ ಹಿಡಿಯುವುದು, ಪ್ಯಾಂಟ್ ಎಳೆಯುವುದು ಅತ್ಯಾಚಾರ ಯತ್ನವಲ್ಲ': Allahabad High Court

ಮಾರ್ಚ್ 17 ರಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿ, ಸ್ತನ ಮುಟ್ಟುವುದು, 'ಪೈಜಾಮಾ' ದಾರವನ್ನು ಎಳೆದರೆ ಅದು ಅತ್ಯಾಚಾರ ಅಪರಾಧವಲ್ಲ ಆದರೆ ಅಂತಹ ಅಪರಾಧವು ಯಾವುದೇ ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗದ ವ್ಯಾಪ್ತಿಗೆ ಬರುತ್ತದೆ ಎಂದು ತೀರ್ಪು ನೀಡಿತ್ತು.

ಇತರ ಸೆಕ್ಷನ್‌ಗಳ ಜೊತೆಗೆ ಐಪಿಸಿ ಸೆಕ್ಷನ್ 376 ರ ಅಡಿಯಲ್ಲಿ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದ್ದ ಕಾಸ್‌ಗಂಜ್ ವಿಶೇಷ ನ್ಯಾಯಾಧೀಶರ ಆದೇಶವನ್ನು ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಇಬ್ಬರು ವ್ಯಕ್ತಿಗಳು ಸಲ್ಲಿಸಿದ್ದ ಪರಿಷ್ಕರಣಾ ಅರ್ಜಿಯ ಮೇರೆಗೆ ನ್ಯಾಯಮೂರ್ತಿ ರಾಮ್ ಮನೋಹರ್ ನಾರಾಯಣ್ ಮಿಶ್ರಾ ಅವರು ಈ ಆದೇಶವನ್ನು ಹೊರಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com