
ಮುಜಾಫರ್‌ನಗರ: ಏನು ಅರಿಯದ ಅಪ್ರಾಪ್ತ ಬಾಲಕನೊಬ್ಬನಿಗೆ ಹಣದ ಆಮಿಷವೊಡ್ಡಿ ಇಸ್ಲಾಂಗೆ ಮತಾಂತರ ಮಾಡಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದೆ.
ಸಿವಿಲ್ ಲೈನ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಹಿಂದೂ ಕ್ಷೌರಿಕನಿಂದ ಬಾಲಕನಿಗೆ ಸುನ್ನತಿ ಕೂಡ ಮಾಡಿಸಲಾಗಿದೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.
ಈ ಸಂಬಂಧ ಬಾಲಕನ ತಂದೆ ಪೊಲೀಸರಿಗೆ ದೂರು ನೀಡಿದ್ದು, ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ತನ್ನ ಮಗನಿಗೆ ಹಣದ ಆಮಿಷವೊಡ್ಡಿ ಮತಾಂತರ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
BNS ಮತ್ತು ಯುಪಿ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆ 2021ರ ಸಂಬಂಧಿತ ಸೆಕ್ಷನ್ ಗಳಡಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಪ್ರಕರಣ ಸಂಬಂಧ ಮೂವರು ಆರೋಪಿಗಳಾದ ಇಮ್ರಾನ್, ನೂರ್ ಅಲಿ ಮತ್ತು ಮಂಗೇ ರಾಮ್ ಅವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಸರ್ಕಲ್ ಆಫೀಸರ್ ರಾಜ್‌ಕುಮಾರ್ ಸಾವ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಬಾಲಕನನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement