
ನವದೆಹಲಿ: ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯ ನಿರ್ವಹಣೆಯಲ್ಲಿ ಕಾಂಗ್ರೆಸ್ ನಾಯಕರೊಬ್ಬರು ಭಾಗವಾಗಿದ್ದರು ಎಂಬ ತಮ್ಮ ಹೇಳಿಕೆಯನ್ನು ದೃಢೀಕರಿಸಲು 1948 ರ ಸರ್ಕಾರದ ಪತ್ರಿಕಾ ಪ್ರಕಟಣೆಯನ್ನು ಉಲ್ಲೇಖಿಸಿದ್ದ ಕಾರಣಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ನೀಡಿದ್ದ ಹಕ್ಕುಚ್ಯುತಿ ನೊಟೀಸ್ ನ್ನು, ರಾಜ್ಯಸಭಾಧ್ಯಕ್ಷ ಜಗದೀಪ್ ಧನಕರ್ ಗುರುವಾರ ತಿರಸ್ಕರಿಸಿದ್ದಾರೆ,
ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ವಿರುದ್ಧ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅಮಿತ್ ಶಾ ವಿರುದ್ಧ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ್ದರು.
ಮೊನ್ನೆ ಮಾರ್ಚ್ 25 ರಂದು ರಾಜ್ಯಸಭೆಯಲ್ಲಿ 2024 ರ ವಿಪತ್ತು ನಿರ್ವಹಣಾ ಮಸೂದೆಯ ಮೇಲಿನ ಚರ್ಚೆಗೆ ಉತ್ತರಿಸುವಾಗ ಹೇಳಿಕೆಗಳನ್ನು ನೀಡಿದ್ದ ಅಮಿತ್ ಶಾ ಅವರು ತಮ್ಮ ಹೇಳಿಕೆಯನ್ನು ದೃಢೀಕರಿಸಲು ಒಪ್ಪಿಕೊಂಡಿದ್ದಾರೆ ಎಂದು ರಾಜ್ಯಸಭಾಧ್ಯಕ್ಷ ಧನಕರ್ ಹೇಳಿದ್ದಾರೆ.
ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಹೇಳಿಕೆ ನೀಡುವ ಸಂದರ್ಭದಲ್ಲಿ, ಜನವರಿ 24, 1998 ರಂದು ಭಾರತ ಸರ್ಕಾರದ ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ ಹೊರಡಿಸಿದ ಪತ್ರಿಕಾ ಹೇಳಿಕೆಯನ್ನು ಉಲ್ಲೇಖಿಸಿದ್ದರು. ಅದರಲ್ಲಿ 1948ರಲ್ಲಿ ಆಗಿನ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯ ನಿರ್ವಹಣೆಯನ್ನು(PMNRF) ಪ್ರಾರಂಭಿಸುವುದಾಗಿ ಘೋಷಿಸಿದ್ದರು, ಇದನ್ನು ಪ್ರಧಾನ ಮಂತ್ರಿಗಳು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರು ಮತ್ತು ಇತರ ಕೆಲವರನ್ನು ಒಳಗೊಂಡ ಸಮಿತಿಯು ನಿರ್ವಹಿಸಬೇಕಿತ್ತು.
ನಾನು ಅದನ್ನು ಕೂಲಕಂಷವಾಗಿ ಪರಿಶೀಲಿಸಿದ್ದು ಅದರಲ್ಲಿ ಯಾವುದೇ ಉಲ್ಲಂಘನೆ ನಡೆದಿಲ್ಲ ಎಂದು ಸಭಾಧ್ಯಕ್ಷ ಧನಕರ್ ಹೇಳಿ ವಿಶೇಷಾಧಿಕಾರ ಉಲ್ಲಂಘನೆ ಸೂಚನೆಯನ್ನು ಇಂದು ಸದನದಲ್ಲಿ ತಿರಸ್ಕರಿಸಿದರು.
Advertisement