
ಜಮ್ಮು: ಕಳೆದ ನಾಲ್ಕು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆ ನಡೆಯುತ್ತಿದ್ದು, ಈ ಹಿಂದೆ ಗುಂಡಿನ ಚಕಮಕಿ ನಡೆದ ಸ್ಥಳದ ಬಳಿ ಶುಕ್ರವಾರ ಡ್ರೋನ್ ಬಳಸಿ ಮತ್ತೊಬ್ಬ ಪೊಲೀಸ್ ಅಧಿಕಾರಿಯ ಮೃತದೇಹವನ್ನು ಪತ್ತೆ ಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದರೊಂದಿಗೆ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ನಾಲ್ಕನೇ ಪೊಲೀಸ್ ಅಧಿಕಾರಿ ಇವರಾಗಿದ್ದು, ಮೂವರು ಭಯೋತ್ಪಾದಕರನ್ನು ಎನ್‌ಕೌಂಟರ್ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸೇನೆ ಮತ್ತು ಸಿಆರ್‌ಪಿಎಫ್ ಸಹಾಯದೊಂದಿಗೆ ಪೊಲೀಸರು ಇಂದು ಬೆಳಗ್ಗೆ ವಿವಿಧ ದಿಕ್ಕುಗಳಿಂದ ಗುಂಡಿನ ದಾಳಿ ನಡೆಸಿದ್ದು, ಎರಡನೇ ದಿನವೂ ಭಾರೀ ಗುಂಡಿನ ಚಕಮಕಿ ಮತ್ತು ಸ್ಫೋಟಗಳು ಮುಂದುವರೆದಿವೆ ಎಂದು ಅವರು ತಿಳಿಸಿದ್ದಾರೆ.
ಗುರುವಾರ, ನಿಷೇಧಿತ ಜೈಶ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆಯ ಮೂವರು ಶಂಕಿತ ಪಾಕಿಸ್ತಾನಿ ಭಯೋತ್ಪಾದಕರು ಮತ್ತು ಅಷ್ಟೇ ಸಂಖ್ಯೆಯ ಪೊಲೀಸರು ದಿನವಿಡೀ ನಡೆದ ಗುಂಡಿನ ಚಕಮಕಿಯ ನಂತರ ನಾಲ್ವರು ಪೊಲೀಸರು ಸಾವನ್ನಪ್ಪಿದ್ದು, ಒಬ್ಬ ಪೊಲೀಸ್ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.
ಗುಂಡಿನ ಚಕಮಕಿಯಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಏಳು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.
ಭದ್ರತಾ ಪಡೆಗಳು ಇಂದು ಬೆಳಗಿನ ಜಾವದಿಂದಲೇ ಕಾರ್ಯಾಚರಣೆಯನ್ನು ಪುನರಾರಂಭಿಸಿದ್ದು, ಮೃತರ ಶವಗಳನ್ನು ಹಿಂಪಡೆಯುವುದು, ಕಾಣೆಯಾದ ಪೊಲೀಸರನ್ನು ಹುಡುಕುವುದು ಮತ್ತು ಇತರ ಉಗ್ರರನ್ನು ತಟಸ್ಥಗೊಳಿಸುವುದು ಪ್ರಾಥಮಿಕ ಗಮನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೂ ಇಬ್ಬರು ಭಯೋತ್ಪಾದಕರು ಅಲ್ಲಿ ಅಡಗಿಕೊಂಡಿದ್ದಾರೆ ಎಂದು ನಂಬಲಾಗಿರುವುದರಿಂದ ಭದ್ರತಾ ಪಡೆಗಳು ಎಚ್ಚರಿಕೆಯಿಂದ ಚಲಿಸುತ್ತಿವೆ ಎಂದು ಅವರು ಹೇಳಿದ್ದಾರೆ.
ನಿನ್ನೆ ರಾಜ್‌ಬಾಗ್‌ನ ಘಾಟಿ ಜುಥಾನಾ ಪ್ರದೇಶದ ಜಖೋಲೆ ಗ್ರಾಮದ ಬಳಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಪಡೆ(ಎಸ್‌ಒಜಿ) ನೇತೃತ್ವದ ದಾಳಿಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಸೇನೆ, ಬಿಎಸ್‌ಎಫ್ ಮತ್ತು ಸಿಆರ್‌ಪಿಎಫ್ ಸಹಾಯದಿಂದ ಈ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement