ಸಾರ್ವಜನಿಕ ಆಸ್ತಿ ವಿರೂಪ ಕಾಯ್ದೆ ಉಲ್ಲಂಘನೆ ಆರೋಪ: ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ವಿರುದ್ಧ FIR

ಮಾರ್ಚ್ 11 ರಂದು ನ್ಯಾಯಾಲಯ ಹೊರಡಿಸಿದ ನಿರ್ದೇಶನದ ಪ್ರಕಾರ ಎಫ್‌ಐಆರ್ ನೋಂದಣಿ ಮಾಡಲಾಗಿದೆ. ದೂರನ್ನು ಔಪಚಾರಿಕವಾಗಿ ದಾಖಲಿಸಿಕೊಂಡು ಅನುಸರಣಾ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯ ಪೊಲೀಸರಿಗೆ ಸೂಚಿಸಿತ್ತು.
Aravind Kejriwal
ಅರವಿಂದ್ ಕೇಜ್ರಿವಾಲ್
Updated on

ನವದೆಹಲಿ: ರಾಜಧಾನಿ ದೆಹಲಿಯ ದ್ವಾರಕಾ ಪ್ರದೇಶದಲ್ಲಿ ಸಾರ್ವಜನಿಕ ಆಸ್ತಿ ವಿರೂಪಗೊಳಿಸುವಿಕೆ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪದ ಮೇರೆಗೆ ಆಮ್ ಆದ್ಮಿ ಪಕ್ಷದ (AAP) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ದೆಹಲಿ ಪೊಲೀಸರು ಸಿಟಿ ಸಿವಿಲ್ ಕೋರ್ಟ್ ಗೆ ತಿಳಿಸಿದ್ದಾರೆ.

ಮಾರ್ಚ್ 11 ರಂದು ನ್ಯಾಯಾಲಯ ಹೊರಡಿಸಿದ ನಿರ್ದೇಶನದ ಪ್ರಕಾರ ಎಫ್‌ಐಆರ್ ನೋಂದಣಿ ಮಾಡಲಾಗಿದೆ. ದೂರನ್ನು ಔಪಚಾರಿಕವಾಗಿ ದಾಖಲಿಸಿಕೊಂಡು ಅನುಸರಣಾ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯ ಪೊಲೀಸರಿಗೆ ಸೂಚಿಸಿತ್ತು.

ಇದಕ್ಕೆ ಪ್ರತಿಕ್ರಿಯೆಯಾಗಿ, ದೆಹಲಿ ಪೊಲೀಸರು ರೌಸ್ ಅವೆನ್ಯೂ ನ್ಯಾಯಾಲಯದ ಹೆಚ್ಚುವರಿ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ (ACJM) ನೇಹಾ ಮಿತ್ತಲ್ ಅವರ ಮುಂದೆ ತಮ್ಮ ವರದಿಯನ್ನು ಮಂಡಿಸಿ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ದೃಢಪಡಿಸಿದ್ದಾರೆ.

Aravind Kejriwal
ಇದು ಅರವಿಂದ್ ಕೇಜ್ರಿವಾಲ್ ಬಳಸುತ್ತಿದ್ದ ಚಿನ್ನ ಲೇಪಿತ ಕಮೋಡ್?

ಪ್ರಕರಣದ ಹಳೆಯ ಸ್ವರೂಪವು ವಿಷಯವನ್ನು ಸಂಪೂರ್ಣವಾಗಿ ಪರಿಶೀಲಿಸಲು ಹೆಚ್ಚುವರಿ ಸಮಯದ ಅಗತ್ಯವಿರುವ ಅಂಶವಾಗಿದೆ ಎಂದು ಉಲ್ಲೇಖಿಸಿ, ಪ್ರಸ್ತುತ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ. ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಏಪ್ರಿಲ್ 18 ಕ್ಕೆ ನಿಗದಿಪಡಿಸಿದೆ.

ದೆಹಲಿಯ ದ್ವಾರಕ ಪ್ರದೇಶದಲ್ಲಿ ಅರವಿಂದ್ ಕೇಜ್ರಿವಾಲ್, ಗುಲಾಬ್ ಸಿಂಗ್ ಮತ್ತು ಇತರರನ್ನು ಒಳಗೊಂಡ ದೊಡ್ಡ ಹೋರ್ಡಿಂಗ್‌ಗಳನ್ನು ಕಾನೂನುಬಾಹಿರವಾಗಿ ಇರಿಸಲಾಗಿದೆ ಎಂದು ಆರೋಪಿಸಿ ಶಿವಕುಮಾರ್ ಸಕ್ಸೇನಾ ಅವರು ದೂರು ಸಲ್ಲಿಸಿದಾಗ ಕಾನೂನು ಹೋರಾಟ ಆರಂಭವಾಗಿದೆ.

ಈ ಪೋಸ್ಟರ್‌ಗಳಲ್ಲಿ ಕೆಲವು ದೆಹಲಿ ಸರ್ಕಾರದ ಉಪಕ್ರಮಗಳನ್ನು ಜಾಹೀರಾತು ಮಾಡಿದ್ದರೆ, ಇನ್ನು ಕೆಲವು ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ನಾಯಕರು ಸೇರಿದಂತೆ ಅನೇಕ ರಾಜಕೀಯ ವ್ಯಕ್ತಿಗಳನ್ನು ಒಳಗೊಂಡ ಧಾರ್ಮಿಕ ಹಬ್ಬಗಳಿಗೆ ಶುಭಾಶಯಗಳನ್ನು ವ್ಯಕ್ತಪಡಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com