ಶಿಂಧೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ನಿರೀಕ್ಷಣಾ ಜಾಮೀನು ಕೋರಿ ಕುನಾಲ್ ಕಾಮ್ರಾ ಮದ್ರಾಸ್ ಹೈಕೋರ್ಟ್ ಮೊರೆ

ತಾನು ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯವನಾಗಿದ್ದು, ಮುಂಬೈ ಪೊಲೀಸರಿಂದ ಬಂಧನದ ಭೀತಿಯಲ್ಲಿದ್ದೇನೆ ಎಂದು ಕಾಮ್ರಾ ಹೇಳಿದ್ದಾರೆ.
ಕುನಾಲ್ ಕಾಮ್ರಾ
ಕುನಾಲ್ ಕಾಮ್ರಾ
Updated on

ಚೆನ್ನೈ: ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ ಅವರು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರನ್ನು 'ದೇಶದ್ರೋಹಿ' ಎಂದು ಕರೆದಿರುವುದು ವಿವಾದಕ್ಕೆ ಕಾರಣವಾಗಿದ್ದು, ಅವರ ವಿರುದ್ಧ ದೂರುಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಕಾಮ್ರಾ, ನಿರೀಕ್ಷಣಾ ಜಾಮೀನು ಕೋರಿ ಶುಕ್ರವಾರ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ತಾನು ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯವನಾಗಿದ್ದು, ಮುಂಬೈ ಪೊಲೀಸರಿಂದ ಬಂಧನದ ಭೀತಿಯಲ್ಲಿದ್ದೇನೆ ಎಂದು ಕಾಮ್ರಾ ಹೇಳಿದ್ದಾರೆ.

ಮುಂಬೈನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಏಕನಾಥ್ ಶಿಂಧೆ ಅವರ ವಿರುದ್ಧ ನೀಡಿದ ಹೇಳಿಕೆಗಳು ಅವರನ್ನು 36 ವರ್ಷದ ಕಾಮ್ರಾ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿವೆ ಮತ್ತು ದೊಡ್ಡ ವಿವಾದಕ್ಕೆ ಕಾರಣವಾಗಿವೆ. ಈ ಸಂಬಂಧ ಮುಂಬೈ ಪೊಲೀಸರು ಎರಡು ಬಾರಿ ಸಮನ್ಸ್ ಜಾರಿ ಮಾಡಿದ್ದಾರೆ.

ಏಕನಾಥ್ ಶಿಂಧೆ ವಿರುದ್ಧದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಕಾರ್ಯಕರ್ತರು ಮುಂಬೈನ ಖಾರ್‌ ಪ್ರದೇಶದ ಕಾಂಟಿನೆಂಟಲ್ ಹೋಟೆಲ್‌ನಲ್ಲಿರುವ ಹ್ಯಾಬಿಟಾಟ್ ಕಾಮಿಡಿ ಕ್ಲಬ್ ಅನ್ನು ಧ್ವಂಸಗೊಳಿಸಿದ್ದಾರೆ. ಸ್ಟ್ಯಾಂಡ್‌ಅಪ್ ಕಾಮಿಡಿಯನ್ ವಿರುದ್ಧ ಪ್ರಕರಣವನ್ನೂ ದಾಖಲಿಸಲಾಗಿದೆ.

ಕುನಾಲ್ ಕಾಮ್ರಾ
ಶಿಂಧೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: 'ಕೀಳು ಮಟ್ಟದ ಕಮೆಂಟ್‌' ಮಾಡುವುದು ಕುನಾಲ್ ಕಾಮ್ರಾಗೆ ಹೊಸದೇನಲ್ಲ- ದೇವೇಂದ್ರ ಫಡ್ನವೀಸ್

ಉಪ ಮುಖ್ಯಮಂತ್ರಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಶಿವಸೇನಾ ಶಾಸಕ ಮುರ್ಜಿ ಪಟೇಲ್ ನೀಡಿದ ದೂರಿನ ಮೇರೆಗೆ ಖಾರ್ ಪೊಲೀಸರು ಕಾಮ್ರಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com