

ತೆಲಂಗಾಣ: ನಾಗರ್‌ಕರ್ನೂಲ್‌ನಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮುಂಬೈ ಬಂದರು ವಲಯದ ಉಪ ಪೊಲೀಸ್ ಆಯುಕ್ತ ಸುಧಾಕರ ಪತ್ತಾರೆ ಹಾಗೂ ಇನ್ನೊಬ್ಬರು ಸಾವನ್ನಪ್ಪಿದ್ದಾರೆ.
ಅವರಿಬ್ಬರೂ ತೆರಳುತ್ತಿದ್ದ ಟೊಯೊಟಾ ಇನ್ನೋವಾ ಕಾರು ಬಸ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಸುಧಾಕರ್ ಪತ್ತಾರೆ 2010ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದರು ಎಂದು ಅಧಿಕಾರಿಯೊಬ್ಬರು ಮುಂಬೈನಲ್ಲಿ ತಿಳಿಸಿದ್ದಾರೆ.
"ಪತ್ತಾರೆ ಅವರು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೈದರಾಬಾದ್‌ನಲ್ಲಿದ್ದರು ಎನ್ನಲಾಗಿದೆ. ಶ್ರೀಶೈಲದಲ್ಲಿನ ದೇವಾಲಯಕ್ಕೆ ಹೋಗುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಎಸ್‌ಯುವಿ ಬಸ್‌ಗೆ ಡಿಕ್ಕಿ ಹೊಡೆದಿದೆ.
ಅವರನ್ನು ಹತ್ತಿರದ ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದರು ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ಡಿಸಿಪಿ ಸುಧಾಕರ್ ಪತ್ತಾರೆ ಅವರ ಅಕಾಲಿಕ ನಿಧನಕ್ಕೆ ಮುಂಬೈ ಪೊಲೀಸ್ ಪಡೆ ಸಂತಾಪ ವ್ಯಕ್ತಪಡಿಸಿದ್ದಾರೆ. ಪತ್ತಾರೆ ಅವರು ಬದ್ಧತೆ ಮತ್ತು ಸಮಗ್ರತೆಯಿಂದ ಸೇವೆ ಸಲ್ಲಿಸಿದ ಸಮರ್ಪಿತ ಅಧಿಕಾರಿ ಎಂದು ಸಂತಾಪ ಸೂಚಕ ಸಂದೇಶದಲ್ಲಿ ಹೇಳಲಾಗಿದೆ.