ಪಾಕಿಸ್ತಾನದೊಂದಿಗಿನ ಉದ್ವಿಗ್ನತೆಯ ನಡುವೆ, ರಾಜನಾಥ್ ಸಿಂಗ್ - ಅಮೆರಿಕದ ರಕ್ಷಣಾ ಕಾರ್ಯದರ್ಶಿ ಹೆಗ್ಸೇತ್ ಮಹತ್ವದ ಮಾತುಕತೆ

ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ಪಹಲ್ಗಾಮ್ ದಾಳಿಯ ನಂತರ, ಭಾರತ ಪಾಕಿಸ್ತಾನದೊಂದಿಗಿನ ರಾಜತಾಂತ್ರಿಕ ಸಂಬಂಧಗಳನ್ನು ಕೆಳಮಟ್ಟಕ್ಕಿಳಿಸಿದೆ.
Union Defence Minister Rajnath Singh (L) and US Defence Secretary Pete Hegseth (R)
ರಾಜನಾಥ್ ಸಿಂಗ್-ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್(Photos| PTI, AP)
Updated on

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರದ ಅತ್ಯಂತ ಉದ್ವಿಗ್ನ ವಾತಾವರಣದ ನಡುವೆ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಮೇ.01 ರಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೇತ್ ಅವರೊಂದಿಗೆ ಮಾತನಾಡಿದ್ದಾರೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

26 ನಾಗರಿಕರನ್ನು ಕೊಂದ ಮತ್ತು ಪಾಕಿಸ್ತಾನದೊಂದಿಗೆ ರಾಜತಾಂತ್ರಿಕ ಘರ್ಷಣೆಗೆ ಕಾರಣವಾದ ಭಯೋತ್ಪಾದಕ ದಾಳಿಯು ಫೋನ್ ಸಂಭಾಷಣೆಯಲ್ಲಿ ಹೆಚ್ಚು ಚರ್ಚೆಯಾಗಿದೆ ಎಂದು ತಿಳಿದುಬಂದೆ.

ಇದಕ್ಕೂ ಮೊದಲು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ವಿದೇಶಾಂಗ ಸಚಿವ ಸುಬ್ರಹ್ಮಣ್ಯಂ ಜೈಶಂಕರ್ ಅವರೊಂದಿಗೆ ಮಾತನಾಡಿ, ದಕ್ಷಿಣ ಏಷ್ಯಾದಲ್ಲಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಮತ್ತು ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿಕೊಳ್ಳಲು ಪಾಕಿಸ್ತಾನದೊಂದಿಗೆ ಕೆಲಸ ಮಾಡಲು ಭಾರತವನ್ನು ಕೇಳಿಕೊಂಡಿದ್ದರು. ಈ ಬೆನ್ನಲ್ಲೇ ಭಾರತ ಮತ್ತು ಅಮೆರಿಕದ ಉನ್ನತ ರಕ್ಷಣಾ ಅಧಿಕಾರಿಗಳ ನಡುವಿನ ಸಂಭಾಷಣೆ ನಡೆದಿದೆ.

Union Defence Minister Rajnath Singh (L) and US Defence Secretary Pete Hegseth (R)
ಭಾರತ, ಪಾಕ್ ನಡುವಿನ ಉದ್ವಿಗ್ನತೆ ಕಡಿಮೆ ಮಾಡಲು ಅಮೆರಿಕ ಒತ್ತಾಯ; ಪಹಲ್ಗಾಮ್ ತನಿಖೆಗೆ ಷರೀಫ್ ಸಹಾಯ ಕೋರಿಕೆ

ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರೊಂದಿಗೆ ರೂಬಿಯೊ ಪ್ರತ್ಯೇಕವಾಗಿ ಮಾತನಾಡಿ ಭಯೋತ್ಪಾದಕ ದಾಳಿಯನ್ನು ಖಂಡಿಸುವ ಅಗತ್ಯವನ್ನು ಒತ್ತಿ ಹೇಳಿದರು ಮತ್ತು "ಈ ಅಸಹ್ಯಕರ ದಾಳಿ"ಯ ತನಿಖೆಯಲ್ಲಿ ಪಾಕಿಸ್ತಾನ ಅಧಿಕಾರಿಗಳು ಸಹಕಾರ ನೀಡಬೇಕೆಂದು ಒತ್ತಾಯಿಸಿದರು.

ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ಪಹಲ್ಗಾಮ್ ದಾಳಿಯ ನಂತರ, ಭಾರತ ಪಾಕಿಸ್ತಾನದೊಂದಿಗಿನ ರಾಜತಾಂತ್ರಿಕ ಸಂಬಂಧಗಳನ್ನು ಕೆಳಮಟ್ಟಕ್ಕಿಳಿಸಿದೆ. 1960 ರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವುದು ಮತ್ತು ಅಟ್ಟಾರಿ ಭೂ-ಸಾರಿಗೆ ಪೋಸ್ಟ್ ನ್ನು ತಕ್ಷಣವೇ ಸ್ಥಗಿತಗೊಳಿಸುವುದು ಸೇರಿದಂತೆ ಹಲವಾರು ಕ್ರಮಗಳನ್ನು ಘೋಷಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com