ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ
ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ

National Herald Case: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ನೋಟಿಸ್ ಜಾರಿ

ಕಾಂಗ್ರೆಸ್ ನಾಯಕರಾದ ಸೋನಿಯಾ ಮತ್ತು ರಾಹುಲ್ ಅವರು ಯಂಗ್ ಇಂಡಿಯನ್‌ನ ಬಹುಪಾಲು ಷೇರುದಾರರಾಗಿದ್ದು, ಅವರಲ್ಲಿ ಪ್ರತಿಯೊಬ್ಬರು ಶೇ. 38ರಷ್ಟು ಷೇರುಗಳನ್ನು ಹೊಂದಿದ್ದಾರೆ.
Published on

ನವದೆಹಲಿ: ನ್ಯಾಷನಲ್ ಹೆರಾಲ್ಡ್‌ನ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ದೆಹಲಿ ನ್ಯಾಯಾಲಯ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.

ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಶಾಲ್ ಗೋಗನೆ, ಯಾವುದೇ ಪ್ರಕರಣದಲ್ಲಿ ಪ್ರತಿಯೊಬ್ಬರಿಗೂ ತಮ್ಮನ್ನು ತಾವು ಸಮರ್ಥಿಸಿಕೊಳ್ಳಲು ಅವಕಾಶ ಇರಬೇಕು. ಅದರಂತೆ ತನಿಖಾ ಸಂಸ್ಥೆಯು ಚಾರ್ಜ್‌ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದಾಗ ಪ್ರತಿಕ್ರಿಯೆಗೆ ಅವಕಾಶ ನೀಡಲಾಗಿತ್ತಾದರೂ, ಒಬ್ಬ ವ್ಯಕ್ತಿಯು ಮಾತನಾಡಲು ಅಥವಾ ಕಾನೂನು ಪ್ರಕ್ರಿಯೆಯ ಪ್ರತಿ ಹಂತದಲ್ಲೂ ತಮ್ಮ ವಾದವನ್ನು ಮಂಡಿಸಲು ಅವಕಾಶ ನೀಡುವುದು ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಅತ್ಯಗತ್ಯವಾಗಿದೆ ಎಂದರು.

ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 8ಕ್ಕೆ ನಿಗದಿಪಡಿಸಲಾಗಿದೆ.

ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು 2014ರ ಜೂನ್ 26ರಂದು ದಾಖಲಿಸಿದ ಖಾಸಗಿ ದೂರನ್ನು ಪಟಿಯಾಲ ಹೌಸ್ ನ್ಯಾಯಾಲಯದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟರು ಪರಿಗಣನೆಗೆ ತೆಗೆದುಕೊಂಡ ನಂತರ, ಜಾರಿ ನಿರ್ದೇಶನಾಲಯ (ಇ.ಡಿ) 2021ರಲ್ಲಿ ತನಿಖೆಯನ್ನು ಪ್ರಾರಂಭಿಸಿತು.

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ದುಬೆ, ಪಿತ್ರೋಡಾ, ಕಾಂಗ್ರೆಸ್ ನಾಯಕರಾದ ದಿವಂಗತ ಮೋತಿಲಾಲ್ ವೋರಾ ಮತ್ತು ಆಸ್ಕರ್ ಫರ್ನಾಂಡೀಸ್, ಖಾಸಗಿ ಕಂಪನಿಯಾದ ಯಂಗ್ ಇಂಡಿಯಾ ಮತ್ತು ಕೆಲವು ಪ್ರಮುಖ ರಾಜಕೀಯ ವ್ಯಕ್ತಿಗಳು ಕ್ರಿಮಿನಲ್ ಪಿತೂರಿ ನಡೆಸಿದ್ದನ್ನು ದೂರಿನಲ್ಲಿ ಎತ್ತಿತೋರಿಸಲಾಗಿದೆ. ಇವರೆಲ್ಲರೂ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ಗೆ (AJL) ಸೇರಿದ 2 ಸಾವಿರ ಕೋಟಿ ಬೆಲೆಬಾಳುವ ಆಸ್ತಿಗಳನ್ನು ಸ್ವಾಧೀನಕ್ಕೆ ತೆಗೆದುಕೊಳ್ಳಲು ಹಣದ ಅಕ್ರಮ ವರ್ಗಾವಣೆ ನಡೆಸಿರುವುದನ್ನು ದೂರಿನಲ್ಲಿ ಹೇಳಲಾಗಿದೆ ಎಂದು ಇ.ಡಿ ಉಲ್ಲೇಖಿಸಿದೆ.

ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ನೋಟಿಸ್ ನೀಡಲು ದೆಹಲಿ ನ್ಯಾಯಾಲಯ ನಿರಾಕರಣೆ

ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರರ ವಿರುದ್ಧ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಯ ಆರೋಪ ಹೊರಿಸಿ ಜಾರಿ ನಿರ್ದೇಶನಾಲಯ (ಇ.ಡಿ) ಏಪ್ರಿಲ್ 9ರಂದು ದೋಷಾರೋಪ ಪಟ್ಟಿ ಸಲ್ಲಿಸಿದೆ. ಕಾಂಗ್ರೆಸ್ ಮುಖಂಡರಾದ ಸ್ಯಾಮ್ ಪಿತ್ರೋಡಾ ಮತ್ತು ಸುಮನ್ ದುಬೆ ಅವರನ್ನು ಕೂಡ ಆರೋಪಿಗಳೆಂದು ಹೇಳಲಾಗಿದೆ.

ಕಾಂಗ್ರೆಸ್ ನಾಯಕರಾದ ಸೋನಿಯಾ ಮತ್ತು ರಾಹುಲ್ ಅವರು ಯಂಗ್ ಇಂಡಿಯನ್‌ನ ಬಹುಪಾಲು ಷೇರುದಾರರಾಗಿದ್ದು, ಅವರಲ್ಲಿ ಪ್ರತಿಯೊಬ್ಬರು ಶೇ. 38ರಷ್ಟು ಷೇರುಗಳನ್ನು ಹೊಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com