ಕೋಝಿಕ್ಕೋಡ್ ನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್: ಉಸಿರುಗಟ್ಟಿ ನಾಲ್ವರು ರೋಗಿಗಳು ಸಾವು

ತಕ್ಷಣವೇ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಯಿತು ಎಂದು ಆಸ್ಪತ್ರೆ ಸೂಪರಿಂಟೆಂಡೆಂಟ್ ತಿಳಿಸಿದ್ದಾರೆ.
Medical college hospital
ವೈದ್ಯಕೀಯ ಕಾಲೇಜು ಆಸ್ಪತ್ರೆ
Updated on

ಕೋಝಿಕ್ಕೋಡ್: ಕೇರಳದ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಕಳೆದ ರಾತ್ರಿ ಉಂಟಾದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿ ನಾಲ್ವರು ರೋಗಿಗಳು ಮೃತಪಟ್ಟ ಘಟನೆ ನಡೆದಿದೆ.

ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಶಾಸಕ ಟಿ ಸಿದ್ದಿಕಿ, ಮೃತ ರೋಗಿಗಳ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದ್ದು, ಶವಗಳನ್ನು ಸ್ಥಳಾಂತರಿಸಲಾಗುತ್ತಿದೆ. ಬೆಂಕಿ ಹೊತ್ತಿಕೊಂಡು ಹೊಗೆಯಿಂದ ಉಸಿರುಗಟ್ಟಿ ನಾಲ್ವರು ಮೃತಪಟ್ಟಿದ್ದಾರೆ ಎಂದರು.

ತಕ್ಷಣವೇ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಯಿತು ಎಂದು ಆಸ್ಪತ್ರೆ ಸೂಪರಿಂಟೆಂಡೆಂಟ್ ತಿಳಿಸಿದ್ದಾರೆ.

ನಡೆದ ಘಟನೆಯೇನು?

ಕೋಝಿಕ್ಕೋಡ್ ನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ತುರ್ತು ವಿಭಾಗದಿಂದ ದಟ್ಟ ಹೊಗೆ ಬಂದಾಗ ಅಲ್ಲಿದ್ದವರು ತೀವ್ರ ಆತಂಕಕ್ಕೀಡಾದರು. ಯುಪಿಎಸ್ ಕೋಣೆಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿರಬಹುದು ಎಂದು ಸಂದೇಹವುಂಟಾಯಿತು.

ಕೂಡಲೇ ಸುಮಾರು 200 ರೋಗಿಗಳನ್ನು ಅವರ ತುರ್ತು ವೈದ್ಯಕೀಯ ಉಪಕರಣಗಳೊಂದಿಗೆ ತುರ್ತು ವಿಭಾಗದಿಂದ ಸ್ಥಳಾಂತರಿಸಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com