ಪಾಕ್‌ನಿಂದ ಅಂಚೆ, ಪಾರ್ಸೆಲ್‌ ವಿನಿಮಯ ಸ್ಥಗಿತಗೊಳಿಸಿದ ಭಾರತ

ಸಂವಹನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಅಂಚೆ ಇಲಾಖೆಯು ಸೇವೆಗಳನ್ನು ಸ್ಥಗಿತಗೊಳಿಸುವ ಆದೇಶವನ್ನು ಹೊರಡಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಭಾರತ ಶನಿವಾರ ಪಾಕಿಸ್ತಾನದಿಂದ ವಿಮಾನ ಮತ್ತು ರಸ್ತೆ, ಜಲ ಮಾರ್ಗಗಳ ಮೂಲಕ ಎಲ್ಲಾ ವರ್ಗದ ಅಂಚೆ ಮತ್ತು ಪಾರ್ಸೆಲ್‌ಗಳ ವಿನಿಮಯವನ್ನು ಸ್ಥಗಿತಗೊಳಿಸಿದೆ.

ಸಂವಹನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಅಂಚೆ ಇಲಾಖೆಯು ಸೇವೆಗಳನ್ನು ಸ್ಥಗಿತಗೊಳಿಸುವ ಆದೇಶವನ್ನು ಹೊರಡಿಸಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ "ಪಾಕಿಸ್ತಾನದ" ನಂಟು ಉಲ್ಲೇಖಿಸಿರುವ ಭಾರತ ಪಾಕ್ ವಿರುದ್ಧ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಮತ್ತು ಉಗ್ರರಿ ಕಠಿಣ ಶಿಕ್ಷೆ ವಿಧಿಸುವ ಭರವಸೆ ನೀಡಿದೆ.

ಸಾಂದರ್ಭಿಕ ಚಿತ್ರ
ತಕ್ಷಣದಿಂದ ಜಾರಿಗೆ ಬರುವಂತೆ ಪಾಕಿಸ್ತಾನದಿಂದ ನೇರ ಮತ್ತು ಪರೋಕ್ಷ ಆಮದು ನಿಷೇಧ: ಕೇಂದ್ರ ಸರ್ಕಾರ ಅಧಿಸೂಚನೆ

ಇನ್ನು ಪಾಕಿಸ್ತಾನದಿಂದ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದನ್ನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತ ಸರ್ಕಾರ ನಿಷೇಧಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com