ಪಾಕಿಸ್ತಾನಕ್ಕೆ ಭಾರತ ಮತ್ತೊಂದು ಶಾಕ್: ಸಿಂಧೂ ನದಿ ಬಳಿಕ ಇದೀಗ ಮತ್ತೆರಡು ಅಣೆಕಟ್ಟುಗಳ ನೀರು ಕೂಡ ಬಂದ್!

ಭಾರತವು ಚೆನಾಬ್ ನದಿಯ ಬಾಗ್ಲಿಹಾರ್ ಅಣೆಕಟ್ಟಿನ ಮೂಲಕ ನೀರಿನ ಹರಿವನ್ನು ಸ್ಥಗಿತಗೊಳಿಸಿದೆ.
India cuts water flow through Baglihar dam to pakistan
ಪಾಕಿಸ್ತಾನಕ್ಕೆ ಮತ್ತೊಂದು ಆಘಾತ ನೀಡಿದ ಭಾರತ
Updated on

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಉಲ್ಬಣವಾಗಿರುವಂತೆಯೇ ಇತ್ತ ಪಾಕಿಸ್ತಾನಕ್ಕೆ ಭಾರತ ಸರ್ಕಾರ ಮತ್ತೊಂದು ಶಾಕ್ ನೀಡಿದೆ.

ಈಗಾಗಲೇ ಸಿಂಧೂ ನದಿಯ ನೀರು ಸ್ಥಗಿತ ಮಾಡಿರುವ ಭಾರತ ಇದೀಗ ಪಾಕಿಸ್ತಾನಕ್ಕೆ ಮತ್ತೊಂದು ಆಘಾತ ನೀಡಿದೆ. ಪಾಕಿಸ್ತಾನಕ್ಕೆ ಹರಿಯುತ್ತಿದ್ದ ಬಾಗ್ಲಿಹಾರ್ ಅಣೆಕಟ್ಟು ಸೇರಿದಂತೆ 2 ಅಣೆಕಟ್ಟುಗಳ ನೀರನ್ನೂ ಕೂಡ ಭಾರತ ನಿಲ್ಲಿಸಿದೆ.

ಭಾರತವು ಚೆನಾಬ್ ನದಿಯ ಬಾಗ್ಲಿಹಾರ್ ಅಣೆಕಟ್ಟಿನ ಮೂಲಕ ನೀರಿನ ಹರಿವನ್ನು ಸ್ಥಗಿತಗೊಳಿಸಿದೆ. ಇದಲ್ಲದೆ ಝೀಲಂ ನದಿಯ ಕಿಶನ್‌ಗಂಗಾ ಅಣೆಕಟ್ಟಿನಲ್ಲೂ ಇದೇ ರೀತಿಯ ಕ್ರಮಗಳನ್ನು ಯೋಜಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ಎರಡೂ ಅಣೆಕಟ್ಟುಗಳು ಜಲವಿದ್ಯುತ್ ಕೇಂದ್ರಗಳಾಗಿದ್ದು, ಜಮ್ಮುವಿನ ರಾಂಬನ್‌ನಲ್ಲಿರುವ ಬಾಗ್ಲಿಹಾರ್ ಮತ್ತು ಉತ್ತರ ಕಾಶ್ಮೀರದ ಕಿಶನ್‌ಗಂಗಾ - ಭಾರತಕ್ಕೆ ನೀರು ಬಿಡುಗಡೆಯ ಸಮಯವನ್ನು ನಿಯಂತ್ರಿಸುವ ಸಾಮರ್ಥ್ಯವನ್ನು ನೀಡುತ್ತವೆ ಎಂದು ಹೇಳಲಾಗಿದೆ.

India cuts water flow through Baglihar dam to pakistan
Pahalgam terror attack: ಇಂಡೋ-ಪಾಕ್ ಉದ್ವಿಗ್ನತೆ; ಪ್ರಧಾನಿ ಮೋದಿ ಭೇಟಿಯಾದ ವಾಯುಸೇನೆ ಮುಖ್ಯಸ್ಥ

ಈ ಹಿಂದೆ ವಿಶ್ವಬ್ಯಾಂಕ್ ಮಧ್ಯಸ್ಥಿಕೆಯಲ್ಲಿ ನಡೆದ ಸಿಂಧೂ ಜಲ ಒಪ್ಪಂದವು 1960 ರಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ಸಿಂಧೂ ನದಿ ಮತ್ತು ಅದರ ಉಪನದಿಗಳ ಬಳಕೆಯನ್ನು ನಿಯಂತ್ರಿಸುತ್ತಿದೆ. ಬಾಗ್ಲಿಹಾರ್ ಅಣೆಕಟ್ಟು ಎರಡು ನೆರೆಹೊರೆಯವರ ನಡುವೆ ದೀರ್ಘಕಾಲದ ವಿವಾದದ ವಿಷಯವಾಗಿದೆ. ಪಾಕಿಸ್ತಾನ ಹಿಂದೆ ಇದೇ ವಿಚಾರವಾಗಿ ವಿಶ್ವಬ್ಯಾಂಕ್ ಮಧ್ಯಸ್ಥಿಕೆಯನ್ನು ಕೋರಿತ್ತು.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು, ಹೆಚ್ಚಾಗಿ ಪ್ರವಾಸಿಗರು ಸಾವನ್ನಪ್ಪಿದ ನಂತರ ದಶಕಗಳಷ್ಟು ಹಳೆಯದಾದ ಒಪ್ಪಂದವನ್ನು ಸ್ಥಗಿತಗೊಳಿಸುವ ಭಾರತದ ನಿರ್ಧಾರ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com