ಪಹಲ್ಗಾಮ್ ದಾಳಿ: ಪ್ರವಾಸಿಗರ ಸುರಕ್ಷತೆ ಕೋರಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರ ಪೀಠ, ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದ ವಕೀಲ ವಿಶಾಲ್ ತಿವಾರಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Updated on

ನವದೆಹಲಿ: ಇತ್ತೀಚೆಗೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನ ಸಾವನ್ನಪ್ಪಿದ ಹಿನ್ನೆಲೆಯಲ್ಲಿ, ಜಮ್ಮು ಮತ್ತು ಕಾಶ್ಮೀರದ ದೂರದ ಗುಡ್ಡಗಾಡು ಪ್ರದೇಶಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ ಸಂಬಂಧಿಸಿದಂತೆ ನಿರ್ದೇಶನ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರ ಪೀಠವು, ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದ ವಕೀಲ ವಿಶಾಲ್ ತಿವಾರಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಇದು ಯಾವುದೇ ಸಾರ್ವಜನಿಕ ಕಾರಣವಿಲ್ಲದ, ಪ್ರಚಾರದ ಉದ್ದೇಶದಿಂದ ಸಲ್ಲಿಸಲಾಗಿದೆ ಎಂದು ಹೇಳಿದೆ.

"ನೀವು ಈ ರೀತಿಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಏಕೆ ಸಲ್ಲಿಸಿದ್ದೀರಿ? ನಿಮ್ಮ ನಿಜವಾದ ಉದ್ದೇಶವೇನು? ಈ ವಿಷಯದ ಸೂಕ್ಷ್ಮತೆಯನ್ನು ನೀವು ಅರ್ಥಮಾಡಿಕೊಳ್ಳುತ್ತಿಲ್ಲವೇ? ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲು ನೀವು ಅನಗತ್ಯ ವೆಚ್ಚಕ್ಕೆ ದಾರಿ ಮಾಡಿಕೊಂಡಿದ್ದೀರಿ ಎಂದು ನಾನು ಭಾವಿಸುತ್ತೇನೆ" ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ತಿವಾರಿ ಅವರು ಹೇಳಿದ್ದಾರೆ.

ಸುಪ್ರೀಂ ಕೋರ್ಟ್
ಇಂಥಹ ಕ್ರಮಗಳು ಸೇನೆಯ ಸ್ಥೈರ್ಯ ಕುಗ್ಗಿಸುತ್ತೆ; ಸಮಯ ವ್ಯರ್ಥ ಮಾಡ್ಬೇಡಿ: Pahalgam attack ಕುರಿತ ಪಿಐಎಲ್ ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ತರಾಟೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡಿರುವುದು ಇದೇ ಮೊದಲು. ಆದ್ದರಿಂದ ಅವರ ಸುರಕ್ಷತೆಗಾಗಿ ನಿರ್ದೇಶನ ಕೋರುತ್ತಿದ್ದೇನೆ ಎಂದು ಅರ್ಜಿದಾರ ವಕೀಲರು ಹೇಳಿದರು.

ಪೀಠವು ತನ್ನ ಆದೇಶದಲ್ಲಿ, "ಅರ್ಜಿದಾರರು ಒಂದರ ನಂತರ ಒಂದರಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ, ಇದರ ಪ್ರಾಥಮಿಕ ಉದ್ದೇಶ ಸಾರ್ವಜನಿಕ ಹಿತಾಸಕ್ತಿಯಲ್ಲ. ಪ್ರಚಾರ ಪಡೆಯುವುದು ಎಂದು ತೋರುತ್ತದೆ" ಎಂದು ಹೇಳಿ ಸುಪ್ರೀಂ ಕೋರ್ಟ್ ಅರ್ಜಿ ವಜಾಗೊಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com