Pahalgam attack: ಭಾರತ-ಪಾಕ್ ನಡುವಣ ಉದ್ವಿಗ್ನತೆ ನಡುವೆ ಮೋದಿಗೆ ರಷ್ಯಾ ಅಧ್ಯಕ್ಷ ಪುಟಿನ್ ಕರೆ! ಯಾಕೆ?

ವ್ಲಾಡಿಮಿರ್ ಪುಟಿನ್ ಅವರು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.
PM Modi and Putin
ಪ್ರಧಾನಿ ಮೋದಿ,ವ್ಲಾಡಿಮಿರ್ ಪುಟಿನ್
Updated on

ನವದೆಹಲಿ: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಹಿನ್ನೆಲೆಯಲ್ಲಿ ಭಾರತ- ಪಾಕಿಸ್ತಾನ ನಡುವಣ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವಂತೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ವ್ಲಾಡಿಮಿರ್ ಪುಟಿನ್ ಅವರು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಅಮಾಯಕರ ಪ್ರಾಣಹಾನಿಗಾಗಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಘೋರ ದಾಳಿ ನಡೆಸಿದ ದುಷ್ಕರ್ಮಿಗಳು ಮತ್ತು ಅವರ ಬೆಂಬಲಿಗರನ್ನು ಕಾನೂನು ಕ್ರಮಕ್ಕೆ ತರಬೇಕು ಎಂದು ಅವರು ಒತ್ತಿ ಹೇಳಿದ್ದಾರೆ.

ಭಾರತ-ರಷ್ಯಾದ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ದೃಢಗೊಳಿಸುವ ಬದ್ಧತೆಯನ್ನು ಉಭಯ ನಾಯಕರು ಪುನರುಚ್ಚರಿಸಿದ್ದಾರೆ ಎಂದು MEA ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಭಾರತದ ಆಹ್ವಾನ ಸ್ವೀಕರಿಸಿದ ಪುಟಿನ್: ಎರಡನೇ ವಿಶ್ವ ಸಮರದ 80 ನೇ ವಿಜಯೋತ್ಸವದ ಹಿನ್ನೆಲೆಯಲ್ಲಿ ಪುಟಿನ್ ಅವರಿಗೆ ಪ್ರಧಾನಿ ಮೋದಿ ಶುಭಾಶಯ ತಿಳಿಸಿದ್ದು, ವರ್ಷದ ನಂತರ ಭಾರತದಲ್ಲಿ ನಡೆಯಲಿರುವ ವಾರ್ಷಿಕ ಶೃಂಗಸಭೆಗೆ ಅವರನ್ನು ಆಹ್ವಾನಿಸಿರುವುದಾಗಿ ಅವರು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನವನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸ್ವೀಕರಿಸಿದ್ದಾರೆ ಎಂದು TASS ವರದಿ ಮಾಡಿದೆ. ರಷ್ಯಾ ಮತ್ತು ಭಾರತದ ನಡುವಿನ ಸಂಬಂಧಗಳು ಬಾಹ್ಯ ಪ್ರಭಾವದಿಂದ ಪ್ರಭಾವಿತವಾಗಿಲ್ಲ ಮತ್ತು ಕ್ರಿಯಾತ್ಮಕವಾಗಿ ಅಭಿವೃದ್ಧಿ ಹೊಂದುತ್ತಿವೆ ಎಂದು ಮೋದಿ ಹಾಗೂ ಪುಟಿನ್ ಮಾತುಕತೆ ವೇಳೆ ಹೇಳಿರುವುದಾಗಿ ತಿಳಿದುಬಂದಿದೆ.

ಪಹಲ್ಗಾಮ್ ಉಗ್ರರ ದಾಳಿ ಹಿನ್ನೆಲೆಯಲ್ಲಿ ಎರಡನೇ ವಿಶ್ವ ಸಮರದ 80ನೇ ವಿಜಯೋತ್ಸವ ಸಮಾರಂಭಕ್ಕೆ ಆಹ್ವಾನಿತ ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಮೇ 9ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ ಎನ್ನಲಾಗಿದೆ.

PM Modi and Putin
ಪಹಲ್ಗಾಮ್ ದಾಳಿ: ಆಟಿಕೆ ರಫೇಲ್ ಜೆಟ್‌ನೊಂದಿಗೆ ಕೇಂದ್ರದ ನಿಷ್ಕ್ರಿಯತೆ ಖಂಡಿಸಿದ ಅಜಯ್ ರೈ

ಇದಕ್ಕೂ ಮುನ್ನ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮೋದಿ ಅವರಿಗೆ ರಷ್ಯಾ ಆಹ್ವಾನ ನೀಡಿತ್ತು. ಆದರೆ ಮೋದಿ ಅವರು ಭಾಗವಹಿಸುವುದಿಲ್ಲ ಎಂದು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಖಚಿತಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com