Operation Sindoor: ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

ಇಂದು ಬೆಳಗಿನ ಜಾವ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಬಗ್ಗೆ ಮಾಹಿತಿ ನೀಡಲು ಕೇಂದ್ರ ಸರ್ಕಾರ ಗುರುವಾರ ಸರ್ವಪಕ್ಷ ಸಭೆ ಕರೆದಿದೆ.
ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
Updated on: 

ನವದೆಹಲಿ: ಭಾರತೀಯ ಸೇನೆ ಬುಧವಾರ ಬೆಳಗಿನ ಜಾವ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸುವ ಮೂಲಕ ಪಹಲ್ಗಾಮ್​ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದೆ.

ಇಂದು ಬೆಳಗಿನ ಜಾವ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಬಗ್ಗೆ ಮಾಹಿತಿ ನೀಡಲು ಕೇಂದ್ರ ಸರ್ಕಾರ ಗುರುವಾರ ಸರ್ವಪಕ್ಷ ಸಭೆ ಕರೆದಿದೆ.

ನಾಳೆ ನಡೆಯುವ ಸರ್ವಪಕ್ಷ ಸಭೆಯ ಕುರಿತು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
Operation Sindoor: ಜೈಷ್, ಎಲ್‌ಇಟಿ, ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಗಳ ಕೇಂದ್ರ ಕಚೇರಿಗಳ ಮೇಲೆ IAF ಟಾರ್ಗೆಟ್; Video

"ಕೇಂದ್ರ ಸರ್ಕಾರ ಮೇ 8, 2025 ರಂದು ಬೆಳಗ್ಗೆ 11 ಗಂಟೆಗೆ ದೆಹಲಿಯ ಸಂಸತ್ತಿನ ಗ್ರಂಥಾಲಯ ಕಟ್ಟಡದ ಸಮಿತಿ ಕೊಠಡಿ: G-074 ರಲ್ಲಿ ಸರ್ವಪಕ್ಷ ನಾಯಕರ ಸಭೆಯನ್ನು ಕರೆದಿದೆ" ಎಂದು ಕಿರಣ್ ರಿಜಿಜು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com