ಅಪರೇಷನ್ ಸಿಂಧೂರ್: ಉಗ್ರರ ಅಡಗುತಾಣಗಳು ಢಮಾರ್; ಶತ್ರುವನ್ನು ಹೇಗೆ ಎದುರಿಸಬೇಕೆಂದು ಚೆನ್ನಾಗಿ ಗೊತ್ತಿದೆ- Pak PM

ಶತ್ರುವನ್ನು ಹೇಗೆ ಎದುರಿಸಬೇಕು ಎಂಬುದು ಪಾಕಿಸ್ತಾನಕ್ಕೆ ಮತ್ತು ಪಾಕಿಸ್ತಾನದ ಸಶಸ್ತ್ರ ಪಡೆಗಳಿಗೆ ಚೆನ್ನಾಗಿ ಗೊತ್ತಿದೆ. ಶತ್ರುವಿನ ದುಷ್ಟ ಗುರಿಗಳು ಯಶಸ್ವಿಯಾಗುವುದಕ್ಕೆ ನಾವು ಯಾವತ್ತೂ ಬಿಡುವುದಿಲ್ಲ ಎಂದು ಅವರು ಉರ್ದುವಿನಲ್ಲಿ ಪೋಸ್ಟ್‌ ಹಾಕಿದ್ದಾರೆ.
Shehbaz Sharif
ಶೆಹಬಾಜ್ ಷರೀಫ್
Updated on

ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಪಂಜಾಬ್ ಪ್ರಾಂತ್ಯದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿರುವುದು "ಯುದ್ಧದ ಕೃತ್ಯ" ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದು, "ಸೂಕ್ತ ಪ್ರತ್ಯುತ್ತರ" ನೀಡುವುದಾಗಿ ತಿಳಿಸಿದ್ದಾರೆ.

ಭಾರತ, ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ನಡೆಸಿರುವ ದಾಳಿಯನ್ನು ಪಾಕ್‌ ದೃಢಪಡಿಸಿದೆ, ಅಲ್ಲಿನ ಪ್ರಧಾನಿ ಷೆಹ್‌ಬಾಜ್‌ ಷರೀಫ್‌ ಅವರು ಟ್ವೀಟ್‌ ಮಾಡಿದ್ದು, ಪಾಕಿಸ್ತಾನದ ಐದು ಸ್ಥಳಗಳ ಮೇಲೆ ದಾಳಿ ಮಾಡಿದೆ ಎಂದು ʼಎಕ್ಸ್‌ʼನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಕುತಂತ್ರಿ ವೈರಿಯು ಪಾಕಿಸ್ತಾನದ ಐದು ಸ್ಥಳಗಳ ಮೇಲೆ ಹೇಡಿತನದ ದಾಳಿ ನಡೆಸಿದೆ. ಭಾರತ ಹೇರಿರುವ ಈ ಯುದ್ಧ ಕ್ರಮದ ವಿರುದ್ಧ ಶಕ್ತಿಯುವಾದ ಪ್ರತಿಕ್ರಿಯೆ ನೀಡುವ ಎಲ್ಲ ಹಕ್ಕುಗಳೂ ಪಾಕಿಸ್ತಾನಕ್ಕೆ ಇವೆ. ಮತ್ತು ಅತ್ಯಂತ ಪ್ರಬಲ ಪ್ರತಿಕ್ರಿಯೆಯನ್ನು ನೀಡಲಾಗುತ್ತಿದೆ.

ಇಡೀ ದೇಶವು ಪಾಕಿಸ್ತಾನ ಸಶಸ್ತ್ರ ಪಡೆಗಳಿಗೆ ಬೆಂಬಲವಾಗಿ ನಿಂತಿದೆ. ಶತ್ರುವನ್ನು ಹೇಗೆ ಎದುರಿಸಬೇಕು ಎಂಬುದು ಪಾಕಿಸ್ತಾನಕ್ಕೆ ಮತ್ತು ಪಾಕಿಸ್ತಾನದ ಸಶಸ್ತ್ರ ಪಡೆಗಳಿಗೆ ಚೆನ್ನಾಗಿ ಗೊತ್ತಿದೆ. ಶತ್ರುವಿನ ದುಷ್ಟ ಗುರಿಗಳು ಯಶಸ್ವಿಯಾಗುವುದಕ್ಕೆ ನಾವು ಯಾವತ್ತೂ ಬಿಡುವುದಿಲ್ಲ ಎಂದು ಅವರು ಉರ್ದುವಿನಲ್ಲಿ ಪೋಸ್ಟ್‌ ಹಾಕಿದ್ದಾರೆ.

ನಿರ್ದಿಷ್ಟ ದಾಳಿಯ ಬೆನ್ನಲ್ಲೇ ಗಡಿಯಲ್ಲಿ ಪಾಕಿಸ್ತಾನವು ಭಾರತದತ್ತ ಗುಂಡು ಹಾರಿಸಲು ಆರಂಭಿಸಿದ್ದು, ಎರಡೂ ಸೇನೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ವರದಿಯಾಗಿದೆ. ಪಾಕಿಸ್ತಾನ ಸೇನಾ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಅವರು ಭಾರತೀಯ ದಾಳಿಯಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 35 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದರು. ಪಂಜಾಬ್ ಮತ್ತು ಪಿಒಕೆ ನಗರಗಳ ಮೇಲೆ ದಾಳಿಗಳು ನಡೆದಿವೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ಬುಧವಾರ ಮುಂಜಾನೆ ಭಾರತ ನಡೆಸಿದ ಆಪರೇಷನ್ ಸಿಂಧೂರ್‌ನಲ್ಲಿ ಒಂದು ಮಗು ಸೇರಿದಂತೆ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 38 ಜನರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನದ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಹೇಳಿದ್ದಾರೆ.

ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಮುಹಮ್ಮದ್ ಆಸಿಫ್ "ಅವರು (ಭಾರತ) ಬಹು ಸ್ಥಳಗಳನ್ನು ಗುರಿಯಾಗಿಸಿಕೊಂಡಿದ್ದಾರೆ, ಅವೆಲ್ಲವೂ ನಾಗರಿಕ ಸ್ಥಳಗಳಾಗಿವೆ" ಎಂದು ಹೇಳಿದ್ದಾರೆ.

ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತದ ಕ್ಷಿಪಣಿ ದಾಳಿಗಳು ನಡೆದಿವೆ, ಆ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದರು.

Shehbaz Sharif
ಆಪರೇಷನ್ ಸಿಂಧೂರ್: ರಾತ್ರೋರಾತ್ರಿ ನಡೆದ ಕಾರ್ಯಾಚರಣೆಯ ಮೇಲೆ ಮೋದಿ ನಿಗಾ; ಇಂಚಿಂಚೂ ಮಾಹಿತಿ ಪಡೆದ ಪ್ರದಾನಿ; Video

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com