ಆಪರೇಷನ್ ಸಿಂಧೂರ್: ರಾತ್ರೋರಾತ್ರಿ ನಡೆದ ಕಾರ್ಯಾಚರಣೆಯ ಮೇಲೆ ಮೋದಿ ನಿಗಾ; ಇಂಚಿಂಚೂ ಮಾಹಿತಿ ಪಡೆದ ಪ್ರದಾನಿ; Video

ಪ್ರಧಾನಿ ನರೇಂದ್ರ ಮೋದಿ ಅವರು ರಾತ್ರಿಯಿಡೀ ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ಮೇಲೆ ನಿಗಾ ಇಟ್ಟಿದ್ದರು ಎಂದು ಎಎನ್ ಐ ಸುದ್ದಿ ಸಂಸ್ಥೆ ವರದಿ ತಿಳಿಸಿದೆ.
Narendra Modi
ನರೇಂದ್ರ ಮೋದಿ
Updated on

ನವದೆಹಲಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಉಗ್ರ ಸಂಘಟನೆಗಳ 9 ಶಿಬಿರಗಳ ಮೇಲೆ ರಾತ್ರೋ ರಾತ್ರಿ ಕ್ಷಿಪಣಿ ದಾಳಿ ನಡೆಸಿದೆ.

ರಾತ್ರೋ ರಾತ್ರಿ ನಡೆದ ಈ ಕಾರ್ಯಾಚರಣೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾತ್ರಿಯಿಡೀ ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ಮೇಲೆ ನಿಗಾ ಇಟ್ಟಿದ್ದರು ಎಂದು ಎಎನ್ ಐ ಸುದ್ದಿ ಸಂಸ್ಥೆ ವರದಿ ತಿಳಿಸಿದೆ.

ಪ್ರಧಾನಿ ಮೋದಿಯವರು ದಾಳಿಯ ಕುರಿತು ಇಂಚಿಂಚೂ ಮಾಹಿತಿಯನ್ನು ಪಡೆದಿದ್ದಾರೆ. ರಕ್ಷಣಾ ಪಡೆಗಳ ಮುಖ್ಯಸ್ಥರು, ಹಿರಿಯ ಗುಪ್ತಚರ ಅಧಿಕಾರಿಗಳು ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋಬಾಲ್‌ ಅವರು ಪ್ರಧಾನಿಗೆ ನಿರಂತರವಾಗಿ ಮಾಹಿತಿ ನೀಡಿದ್ದಾರೆ.

ಮಂಗಳವಾರ ರಾತ್ರಿ ಪ್ರಾರಂಭವಾಗಿ ಬುಧವಾರದ ಬೆಳಗಿನ ಜಾವದವರೆಗೂ ಪ್ರಧಾನಿ ಮತ್ತು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮುಖ್ಯಸ್ಥರ ನಡುವೆ ಸಂವಹನ ನಡೆದಿದೆ ಎಂದು ಹೇಳಲಾಗಿದೆ.

26 ಜನರ ಭೀಕರ ಪಹಲ್ಗಾಮ್ ಹತ್ಯಾಕಾಂಡಕ್ಕೆ ಪ್ರತೀಕಾರವಾಗಿ, ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಮುಂಜಾನೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ಗುರಿಗಳ ಮೇಲೆ ಕ್ಷಿಪಣಿ ದಾಳಿ ನಡೆಸಿವೆ, ಇದರಲ್ಲಿ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಭದ್ರಕೋಟೆಯಾಗಿರುವ ಬಹಾವಲ್ಪುರ್ ಸೇರಿದೆ.

Narendra Modi
'ಭಾರತದ ಪಾಲಿನ ನೀರು ಕೂಡ ಹೊರಹೋಗುತ್ತಿತ್ತು, ಆದರೆ ಈಗ...': ಸಿಂಧೂ ನದಿ ನೀರು ಒಪ್ಪಂದ ಅಮಾನತು ಬಗ್ಗೆ ಮೋದಿ ಮೊದಲ ಹೇಳಿಕೆ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com