Operation Sindoor: ರಾಷ್ಟ್ರಪತಿಗೆ ಪ್ರಧಾನಿ ಮೋದಿ ಮಾಹಿತಿ; ಅಮಿತ್ ಶಾರಿಂದ ಗಡಿ ರಾಜ್ಯಗಳ ಸಿಎಂ ಭೇಟಿ

ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ನಮ್ಮ ಸೇನೆ ಅತ್ಯುತ್ತಮ ಕೆಲಸ ಮಾಡಿದೆ. ಇದು ಇಡೀ ದೇಶಕ್ಕೆ ಹೆಮ್ಮೆಯ ಕ್ಷಣ ಎಂದು ಹೇಳಿದರು.
ರಾಷ್ಟ್ರಪತಿಗೆ ಮಾಹಿತಿ ನೀಡಿದ ಪ್ರಧಾನಿ ಮೋದಿ
ರಾಷ್ಟ್ರಪತಿಗೆ ಮಾಹಿತಿ ನೀಡಿದ ಪ್ರಧಾನಿ ಮೋದಿ
Updated on

ನವದೆಹಲಿ: ಭಾರತೀಯ ಸೇನೆ ಬುಧವಾರ ಬೆಳಗಿನ ಜಾವ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸುವ ಮೂಲಕ ಪಹಲ್ಗಾಮ್​ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದೆ.

ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಸಚಿವ ಸಂಪುಟ ಸಭೆ ನಡೆಸಿದರು. ನಂತರ ರಾಷ್ಟ್ರಪತಿ ಭವನಕ್ಕೆ ತೆರಳಿದ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ, ಇಂದು ಬೆಳಗಿನ ಜಾವ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಾದ್ಯಂತ ಒಂಬತ್ತು ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ನಡೆಸಿದ 'ಆಪರೇಷನ್ ಸಿಂಧೂರ್' ಬಗ್ಗೆ ವಿವರಿಸಿದರು.

ಈ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಧ್ಯಾಹ್ನ 2 ಗಂಟೆಗೆ ಗಡಿ ರಾಜ್ಯಗಳ ಮುಖ್ಯಮಂತ್ರಿಗಳು, ಡಿಜಿಪಿಗಳು ಮತ್ತು ಮುಖ್ಯ ಕಾರ್ಯದರ್ಶಿಗಳ ಸಭೆ ಕರೆದಿದ್ದಾರೆ.

ರಾಷ್ಟ್ರಪತಿಗೆ ಮಾಹಿತಿ ನೀಡಿದ ಪ್ರಧಾನಿ ಮೋದಿ
Operation Sindoor: ಪಾಕಿಸ್ತಾನ, ಪಿಒಕೆಯಲ್ಲಿ ಈ ಒಂಬತ್ತು ಭಯೋತ್ಪಾದಕ ಕೇಂದ್ರಗಳು ಭಾರತ ಸೇನೆಗೆ ಟಾರ್ಗೆಟ್ ಆಗಿದ್ದು ಏಕೆ? ಅವು ಯಾವುವು?

ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ರಾಜಸ್ಥಾನ, ಗುಜರಾತ್, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಸಿಕ್ಕಿಂ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳು ಮತ್ತು ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಹಾಗೂ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ನಮ್ಮ ಸೇನೆ ಅತ್ಯುತ್ತಮ ಕೆಲಸ ಮಾಡಿದೆ. ಇದು ಇಡೀ ದೇಶಕ್ಕೆ ಹೆಮ್ಮೆಯ ಕ್ಷಣ ಎಂದು ಹೇಳಿದರು.

ಸಂಪುಟ ಸಭೆಯಲ್ಲಿ ಭಾರತದ ಮೂರು ಸೇನೆಪಡೆಗಳನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದು, ನಮ್ಮ ಸೇನೆ ಅದ್ಭುತ ಕೆಲಸ ಮಾಡಿದೆ. ಇಡೀ ದೇಶ ಅವರ ಬಗ್ಗೆ ಹೆಮ್ಮೆಪಡುತ್ತದೆ ಎಂದು ಹೇಳಿದರು. ಆಪರೇಷನ್ ಸಿಂಧೂರ್ ಯಶಸ್ಸಿನ ಬಗ್ಗೆ ಪ್ರಧಾನಿ ಮೋದಿ ತಮ್ಮ ಸಂಪುಟಕ್ಕೆ ತಿಳಿಸಿದಾಗ ಎಲ್ಲಾ ಸದಸ್ಯರು ಮೇಜು ಬಡಿದು ಮೆಚ್ಚುಗೆ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com