ಪಾಕ್ ಜೊತೆ ಉದ್ವಿಗ್ನತೆ: ಭಾರತಕ್ಕೆ ಸೌದಿ ಅರೇಬಿಯಾ ಸಚಿವ ಅಡೆಲ್ ಅಲ್ಜುಬೈರ್ ಅನಿರೀಕ್ಷಿತ ಭೇಟಿ

"ಇಂದು ಬೆಳಗ್ಗೆ ಸೌದಿ ಅರೇಬಿಯಾದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವರೊಂದಿಗೆ ನಡೆಸಿದ ಮಾತುಕತೆ ಉತ್ತಮವಾಗಿತ್ತು ಎಂದು ಜೈಶಂಕರ್ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
External Affairs Minister S Jaishankar shakes hands with Minister of State for Foreign Affairs of Saudi Arabia Adel al-Jubeir during a meeting, in New Delhi, on May 8, 2025.
ದೆಹಲಿಯಲ್ಲಿ ನಡೆದ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಸೌದಿ ಅರೇಬಿಯಾದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಅಡೆಲ್ ಅಲ್-ಜುಬೈರ್ ಅವರೊಂದಿಗೆ ಹಸ್ತಲಾಘವ ಮಾಡುತ್ತಿದ್ದಾರೆ.
Updated on

ನವದೆಹಲಿ: ಸೌದಿ ಅರೇಬಿಯಾದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಅಡೆಲ್ ಅಲ್ಜುಬೈರ್ ಅವರು ಗುರುವಾರ ಭಾರತಕ್ಕೆ ಅನಿರೀಕ್ಷಿತ ಭೇಟಿ ನೀಡಿದ್ದು, ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡುವ ಬಗ್ಗೆ ಗಮನಹರಿಸುವಂತೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ನಡೆಸಿದ ಮಾತುಕತೆಯಲ್ಲಿ ವಿಶೇಷ ಒತ್ತು ನೀಡಿದ್ದಾರೆ.

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಭಾರತೀಯ ಸೇನೆ ನಡೆಸಿದ 'ಆಪರೇಷನ್ ಸಿಂಧೂರ್' ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧಗಳು ಮತ್ತಷ್ಟು ಹದಗೆಟ್ಟಿರುವ ಸಂದರ್ಭದಲ್ಲಿ ಅಲ್ಜುಬೈರ್ ಅವರ ದೆಹಲಿ ಭೇಟಿಯಾಗಿದೆ.

"ಇಂದು ಬೆಳಗ್ಗೆ ಸೌದಿ ಅರೇಬಿಯಾದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವರೊಂದಿಗೆ ನಡೆಸಿದ ಮಾತುಕತೆ ಉತ್ತಮವಾಗಿತ್ತು ಎಂದು ಜೈಶಂಕರ್ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಭಯೋತ್ಪಾದನೆಯನ್ನು ದೃಢವಾಗಿ ಎದುರಿಸುವ ಬಗ್ಗೆ ಭಾರತದ ದೃಷ್ಟಿಕೋನಗಳನ್ನು ಹಂಚಿಕೊಂಡಿದ್ದೇವೆ ಎಂದು ಅವರು ಹೇಳಿದರು.

ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಇರಾನಿನ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಕೂಡ ನಿನ್ನೆ ದೆಹಲಿಗೆ ಬಂದಿದ್ದರು. ಅರಘ್ಚಿ ಶೀಘ್ರದಲ್ಲೇ ಜೈಶಂಕರ್ ಅವರೊಂದಿಗೆ ವ್ಯಾಪಕ ಮಾತುಕತೆ ನಡೆಸಲಿದ್ದಾರೆ. ಅವರು ಮಧ್ಯಾಹ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com