
ರಾಂಚಿ: ದುಷ್ಕರ್ಮಿಯೋರ್ವ ತನ್ನದೇ ಪ್ರೇಯಸಿಯನ್ನು ಕರೆಸಿಕೊಂಡು ಸ್ನೇಹತರೊಂದಿಗೆ ಸೇರಿ ಸಾಮೂಹಿಕವಾಗಿ ಆತ್ಯಾಚಾರ ಮಾಡಿರುವ ಘಟನೆ ಜಾರ್ಖಂಡ್ ನಲ್ಲಿ ವರದಿಯಾಗಿದೆ.
ಜಾರ್ಖಂಡ್ ನ ರಾಜಧಾನಿ ರಾಂಚಿಯ ಚನ್ಹೋ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ಮೂರು ಮಂದಿ ಅಪ್ರಾಪ್ತರು ಸೇರಿದಂತೆ ಒಟ್ಟು 5 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ ಮೇ 7ರಂದು ರಾತ್ರಿ 11 ಗಂಟೆ ಸುಮಾರಿನಲ್ಲಿ ರಾಂಚಿ ನಗರದಿಂದ ಸುಮಾರು 45 ಕಿ.ಮೀ ದೂರದಲ್ಲಿರುವ ಚನ್ಹೋ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಯುವತಿಯ ದೂರಿನ ಅನ್ವಯ ತನ್ನ ಅಪ್ರಾಪ್ತ ಪ್ರೇಮಿ ತನ್ನನ್ನು ನೋಡಬೇಕು ಎಂದು ಕರೆಸಿಕೊಂಡು ಬಳಿಕ ಬೈಕ್ ನಲ್ಲಿ ಕೂರಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ. ಅಲ್ಲದೆ ತನ್ನ ಬಳಿಕ ತನ್ನ ಸ್ನೇಹಿತರಿಂದಲೂ ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿಸಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.
ಯುವತಿ ದೂರಿನ ಅನ್ವಯ ಚನ್ಹೋ ಪೊಲೀಸರು ಎಫ್ ಐಆರ್ ದಾಖಲಿಸಿ ಲವರ್ ಸೇರಿದಂತೆ ಎಲ್ಲ ಐದೂ ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
Advertisement