Operation Sindoor: ಪಾಕಿಸ್ತಾನ ವಾಯುನೆಲೆಗಳ ಮೇಲೆ ಭಾರತ ದಾಳಿ

ಪಾಕಿಸ್ತಾನ ವಿಮಾನ ನಿಲ್ದಾಣ ಪ್ರಾಧಿಕಾರವು ಅಧಿಸೂಚನೆ ಹೊರಡಿಸಿದ್ದು, ಎಲ್ಲಾ ರೀತಿಯ ವಾಯು ಸಂಚಾರಕ್ಕಾಗಿ ಪಾಕಿಸ್ತಾನದ ವಾಯುಪ್ರದೇಶವನ್ನು ನಸುಕಿನ ಜಾವ 3.15 ರಿಂದ ಮಧ್ಯಾಹ್ನ 12 ರವರೆಗೆ ಮುಚ್ಚಲಾಗಿದೆ ಎಂದು ತಿಳಿಸಿದೆ.
Police officers remove vehicles and people from the main entry of Nur Khan airbase following Indian missile strike on airbase, in Rawalpindi, Pakistan, Saturday, May 10, 2025.
ಪಾಕಿಸ್ತಾನದ ರಾವಲ್ಪಿಂಡಿಯಲ್ಲಿರುವ ವಾಯುನೆಲೆಯ ಮೇಲೆ ಭಾರತೀಯ ಕ್ಷಿಪಣಿ ದಾಳಿಯ ನಂತರ, ಶನಿವಾರ, ಮೇ 10, 2025 ರಂದು ನೂರ್ ಖಾನ್ ವಾಯುನೆಲೆಯ ಮುಖ್ಯ ದ್ವಾರದಿಂದ ವಾಹನಗಳು ಮತ್ತು ಜನರನ್ನು ಪೊಲೀಸ್ ಅಧಿಕಾರಿಗಳು ಕಳಿಸುತ್ತಿದ್ದಾರೆ.Photo | AP
Updated on

ಇಸ್ಲಾಮಾಬಾದ್: ಇಂದು ಶನಿವಾರ ಮುಂಜಾನೆ ಪಾಕಿಸ್ತಾನದ ಮೂರು ವಾಯುನೆಲೆಗಳ ಮೇಲೆ ಭಾರತೀಯ ಕ್ಷಿಪಣಿ ಮತ್ತು ಡ್ರೋನ್‌ಗಳು ಗುರಿಯಾಗಿಸಿ ದಾಳಿ ನಡೆಸಿವೆ.

ಪಾಕಿಸ್ತಾನದ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಅವರು ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ಇಸ್ಲಾಮಾಬಾದ್‌ನಲ್ಲಿ ಆತುರದಿಂದ ಕರೆದ ಪತ್ರಿಕಾಗೋಷ್ಠಿಯಲ್ಲಿ ಪಾಕಿಸ್ತಾನ ವಾಯುಪಡೆಯ ನೂರ್ ಖಾನ್ (ಚಕ್ಲಾಲಾ, ರಾವಲ್ಪಿಂಡಿ), ಮುರಿಯ್ (ಚಕ್ವಾಲ್) ಮತ್ತು ರಫೀಕಿ (ಜಾಂಗ್ ಜಿಲ್ಲೆಯ ಶೋರ್ಕೋಟ್) ವಾಯುನೆಲೆಗಳನ್ನು ಭಾರತ ಗುರಿಯಾಗಿಸಿ ದಾಳಿ ಮಾಡಿದೆ ಎಂದು ಹೇಳಿದ್ದಾರೆ.

ವಾಯುಪಡೆಯ ಎಲ್ಲಾ ಸ್ವತ್ತುಗಳು ಸುರಕ್ಷಿತವಾಗಿವೆ ಎಂದು ಅವರು ಹೇಳಿದ್ದಾರೆ. ಭಾರತವು ತನ್ನ ಜೆಟ್‌ ಮೂಲಕ ಗಾಳಿಯಿಂದ ಮೇಲ್ಮೈಗೆ ಕ್ಷಿಪಣಿಗಳನ್ನು ಹಾರಿಸಿದೆ, ಪಾಕಿಸ್ತಾನದ ವಾಯು ರಕ್ಷಣಾ ವ್ಯವಸ್ಥೆಯು ಹಲವಾರು ಕ್ಷಿಪಣಿಗಳನ್ನು ತಡೆಹಿಡಿದಿದೆ ಎಂದು ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಯಾವುದೇ ಪ್ರಶ್ನೆಗಳಿಗೆ ಉತ್ತರಿಸದೆ ಹೇಳಿಕೆ ನೀಡಿ ಹಠಾತ್ತನೆ ಕೊನೆಗೊಳಿಸಿದ್ದಾರೆ.

ನಿಮಿಷಗಳ ನಂತರ, ಪಾಕಿಸ್ತಾನ ಪ್ರತಿದಾಳಿ ನಡೆಸಿದೆ ಎಂದು ಭದ್ರತಾ ಅಧಿಕಾರಿಗಳನ್ನು ಉಲ್ಲೇಖಿಸಿ ಸರ್ಕಾರಿ ಪಿಟಿವಿ ವರದಿ ಮಾಡಿದೆ. ಪಾಕಿಸ್ತಾನ ವಿಮಾನ ನಿಲ್ದಾಣ ಪ್ರಾಧಿಕಾರವು ಅಧಿಸೂಚನೆ ಹೊರಡಿಸಿದ್ದು, ಎಲ್ಲಾ ರೀತಿಯ ವಾಯು ಸಂಚಾರಕ್ಕಾಗಿ ಪಾಕಿಸ್ತಾನದ ವಾಯುಪ್ರದೇಶವನ್ನು ನಸುಕಿನ ಜಾವ 3.15 ರಿಂದ ಮಧ್ಯಾಹ್ನ 12 ರವರೆಗೆ ಮುಚ್ಚಲಾಗಿದೆ ಎಂದು ತಿಳಿಸಿದೆ.

ಇಂದು ಮುಂಜಾನೆ ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಪಾಕಿಸ್ತಾನಿ ಶೆಲ್ ದಾಳಿಯಲ್ಲಿ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಮೃತಪಟ್ಟು ಇಬ್ಬರು ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Police officers remove vehicles and people from the main entry of Nur Khan airbase following Indian missile strike on airbase, in Rawalpindi, Pakistan, Saturday, May 10, 2025.
Punjab: ಪಾಕಿಸ್ತಾನ ಡ್ರೋನ್ ದಾಳಿಯಲ್ಲಿ ಒಂದೇ ಕುಟುಂಬದ ಮೂವರಿಗೆ ಗಾಯ; ಆರು ಗಡಿ ಜಿಲ್ಲೆಗಳಲ್ಲಿ ವಿದ್ಯುತ್ ವ್ಯತ್ಯಯ

ಹೆಚ್ಚುವರಿ ಉಪ ಆಯುಕ್ತ ರಾಜೌರಿ ರಾಜ್ ಕುಮಾರ್ ಥಾಪಾ ಮತ್ತು ಇಬ್ಬರು ಸಿಬ್ಬಂದಿಗಳು ರಾಜೌರಿ ಪಟ್ಟಣದಲ್ಲಿರುವ ಅವರ ನಿವಾಸಕ್ಕೆ ಫಿರಂಗಿ ಶೆಲ್ ಬಡಿದು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರನ್ನು ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು.

'ಅಧಿಕಾರಿಗಳ ಪ್ರಕಾರ, ವಿಮಾನ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಾಪನೆಗಳ ಬಳಿ ಸ್ಫೋಟಗಳ ಸದ್ದು ಕೇಳಿಬಂದಿದೆ. ಸ್ಫೋಟಗಳ ಸದ್ದು ಕೇಳಿದ ತಕ್ಷಣ, ನಗರದಲ್ಲಿ ಸೈರನ್‌ಗಳು ಮೊಳಗಿದವು. ಕಾಶ್ಮೀರ ಕಣಿವೆಯ ಇತರ ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಮಿಲಿಟರಿ ಸಂಘರ್ಷದ ಮಧ್ಯೆ, ಇಂದು ಬೆಳಗಿನ ಜಾವ ಪಂಜಾಬ್‌ನ ಪಠಾಣ್‌ಕೋಟ್ ಜಿಲ್ಲೆಯಲ್ಲಿ ಸ್ಫೋಟದಂತಹ ಶಬ್ದಗಳು ಕೇಳಿಬಂದವು. ನಸುಕಿನ ಜಾವ 5 ಗಂಟೆ ಸುಮಾರಿಗೆ ಸ್ಫೋಟದ ಶಬ್ದಗಳು ಕೇಳಿಬಂದವು. ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇರಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com