ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಅಗತ್ಯ ಈಗ ಮೊದಲಿಗಿಂತ ಹೆಚ್ಚಾಗಿದೆ: ಕಾಂಗ್ರೆಸ್

ಪಹಲ್ಗಾಮ್ ದಾಳಿ ನಂತರದ 18 ದಿನಗಳ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನಕ್ಕೆ ಮೊದಲಿಗಿಂತ ಈಗ ಹೆಚ್ಚಾಗಿದೆ.
Jairam Ramesh
ಜೈರಾಮ್ ರಮೇಶ್
Updated on

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ತಕ್ಷಣದಿಂದ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ವ ಪಕ್ಷ ಸಭೆಗೆ ಮತ್ತು ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಅಗತ್ಯ ಈಗ ಮೊದಲಿಗಿಂತ ಹೆಚ್ಚಾಗಿದೆ ಎಂದು ಕಾಂಗ್ರೆಸ್ ಶನಿವಾರ ಹೇಳಿದೆ. ಪಹಲ್ಗಾಮ್ ದಾಳಿ ನಂತರದ 18 ದಿನಗಳ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯುವಂತೆ ವಿರೋಧ ಪಕ್ಷ ಒತ್ತಾಯಿಸಿದೆ.

ಭಾರತ ಮತ್ತು ಪಾಕಿಸ್ತಾನಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ತಮ್ಮ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ ಕರೆದು ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಅಗತ್ಯ ಈಗ ಮೊದಲಿಗಿಂತ ಹೆಚ್ಚಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿದ್ದಾರೆ.

ಪಹಲ್ಗಾಮ್ ದಾಳಿ ನಂತರದ 18 ದಿನಗಳ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನಕ್ಕೆ ಮೊದಲಿಗಿಂತ ಈಗ ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.

Jairam Ramesh
ಸದ್ಯಕ್ಕೆ ಕದನ ವಿರಾಮ: ಭಯೋತ್ಪಾದನೆ ವಿರುದ್ಧ ಭಾರತದ ನಿಲುವು ಬದಲಾಗಲ್ಲ; ಪಾಕ್ ಗೆ ಜೈಶಂಕರ್ ಎಚ್ಚರಿಕೆ

ಅಮೆರಿಕ ಮಧ್ಯವರ್ತಿಯಾಗಿ ಮಾತುಕತೆ ನಡೆಸಿದ ಬಳಿಕ ಕದನ ವಿರಾಮ ತಕ್ಷಣದಿಂದ ಜಾರಿಗೆ ಬರಲು ಭಾರತ ಮತ್ತು ಪಾಕಿಸ್ತಾನ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದರು.

ಈ ಟ್ವೀಟ್ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ, ಪಾಕಿಸ್ತಾನದ ಮಿಲಿಚರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (DGMO) ಮತ್ತು ಭಾರತ ಡಿಜಿಎಂಒ ಅವರೊಂದಿಗೆ ಮಾತುಕತೆ ನಡೆಸಿದ್ದು, ಭಾರತೀಯ ಕಾಲಮಾನ ಸಂಜೆ 5 ಗಂಟೆಯಿಂದ ಜಾರಿಗೆ ಬರುವಂತೆ ಭೂ, ವಾಯು ಮತ್ತು ನೌಕಾ ಪಡೆಯ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com