ಪಾಕಿಸ್ತಾನ್ ಜಿಂದಾಬಾದ್ ಘೋಷಣೆ: ಉತ್ತರ ಪ್ರದೇಶದಲ್ಲಿ ವ್ಯಕ್ತಿಯೋರ್ವನ ಬಂಧನ

ಬಂಧಿತ ವ್ಯಕ್ತಿಯನ್ನು ಅನ್ವರ್ ಜಿಂದಾಬಾದ್ ಎಂದು ಗುರುತಿಸಲಾಗಿದೆ. ಶುಕ್ರವಾರ ಸಾಮಾಜಿಕ ಮಾಧ್ಯಮಗಳಲ್ಲಿ 'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಕೂಗಿದ ವಿಡಿಯೋ ಕಾಣಿಸಿಕೊಂಡ ನಂತರ ಜಮೀಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ.
arrest
ಬಂಧನonline desk
Updated on

ಲಖನೌ: ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಉತ್ತರ ಪ್ರದೇಶದ ಕೊಟ್ವಾಲಿಯಲ್ಲಿ 'ಪಾಕಿಸ್ತಾನ ಜಿಂದಾಬಾದ್' ಎಂದು ಕೂಗಿದ ಆರೋಪದ ಮೇಲೆ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಅನ್ವರ್ ಜಿಂದಾಬಾದ್ ಎಂದು ಗುರುತಿಸಲಾಗಿದೆ. ಶುಕ್ರವಾರ ಸಾಮಾಜಿಕ ಮಾಧ್ಯಮಗಳಲ್ಲಿ 'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಕೂಗಿದ ವಿಡಿಯೋ ಕಾಣಿಸಿಕೊಂಡ ನಂತರ ಜಮೀಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ.

"ವಿಡಿಯೋ ಪ್ರಸಾರವಾದ ನಂತರ ಅನ್ವರ್ ಜಮೀಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಾವು ಪ್ರಸ್ತುತ ಬಂಧಿತ ವ್ಯಕ್ತಿಯನ್ನು ವಿಚಾರಣೆ ನಡೆಸುತ್ತಿದ್ದೇವೆ" ಎಂದು ಅಧಿಕಾರಿ ರಾಜುಕುಮಾರ್ ಸವ್ಸಾಯಿದ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಆದಾಗ್ಯೂ, ಇದು ತನ್ನ ಸ್ನೇಹಿತನೊಬ್ಬ ಮಾಡಿದ ಹಳೆಯ ವಿಡಿಯೋ ಎಂದು ಜಮೀಲ್ ಹೇಳಿಕೊಂಡಿದ್ದಾರೆ. ತನ್ನ ಸ್ನೇಹಿತನೊಂದಿಗೆ ನಡೆದ ಬೆಟ್ಟಿಂಗ್‌ನಲ್ಲಿ ತಾನು ಈ ಘೋಷಣೆಗಳನ್ನು ಕೂಗಿದ್ದೇನೆ ಎಂದು ಅವರು ಹೇಳಿದ್ದಾರೆ.

ಹಿಂದೂ ಸಂಘಟನೆಗಳು ಆತನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿವೆ. ಭಾರತ "ಗೌರವಾನ್ವಿತ" ರೀತಿಯಲ್ಲಿ ಸಮರ್ಥಿಸಿಕೊಂಡು ಪ್ರತಿಕ್ರಿಯಿಸಿದರೂ, ಕಳೆದ ಕೆಲವು ದಿನಗಳಿಂದ ಪಾಕಿಸ್ತಾನ "ಪ್ರಚೋದನಕಾರಿ ಮತ್ತು ಉದ್ರೇಕಕಾರಿ" ಕ್ರಮಗಳನ್ನು ಕೈಗೊಂಡಿದೆ ಎಂದು ಭಾರತ ಶನಿವಾರ ಆರೋಪಿಸಿದೆ.

arrest
'ಭಾರತ-ಪಾಕ್ ಸಂಘರ್ಷ ಉಲ್ಬಣಗೊಂಡರೆ ಯಾರೂ ಗೆಲ್ಲುವುದಿಲ್ಲ'; ಬ್ರಿಟನ್ ಸಲಹೆಗೆ S Jaishankar ಖಡಕ್ ಪ್ರತಿಕ್ರಿಯೆ

ಏಪ್ರಿಲ್ 22 ರಂದು 26 ಜೀವಗಳನ್ನು ಬಲಿ ಪಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು 'ಆಪರೇಷನ್ ಸಿಂಧೂರ್' ನ್ನು ಪ್ರಾರಂಭಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com