'Operation Sindoor ಇನ್ನೂ ಮುಗಿದಿಲ್ಲ...': ಕದನ ವಿರಾಮ ಘೋಷಣೆ ಬೆನ್ನಲ್ಲೇ IAF ಮಹತ್ವದ ಹೇಳಿಕೆ!

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಉದ್ದೇಶಪೂರ್ವಕ ಮತ್ತು ವಿವೇಚನಾಯುಕ್ತ ರೀತಿಯಲ್ಲಿ ನಡೆಸಲಾಗಿದೆ ಎಂದು ಭಾರತೀಯ ವಾಯುಸೇನೆ ತಿಳಿಸಿದೆ.
Operation Sindoor Still Ongoing
ಆಪರೇಷನ್ ಸಿಂಧೂರ ಕಾರ್ಯಾಚರಣೆ
Updated on

ನವದೆಹಲಿ: ಪಹಲ್ಗಾಮ್ ಉಗ್ರದಾಳಿ ಬಳಿಕ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಭುಗಿಲೆದ್ದಿದ್ದ ಸೇನಾ ಸಂಘರ್ಷ ಕದನ ವಿರಾಮ ಘೋಷಣೆಯೊಂದಿಗೆ ಮೆತ್ತಗಾಗಿದೆ ಎನ್ನುವಾಗಲೇ ಭಾರತೀಯ ವಾಯುಸೇನೆ Operation Sindoor ಕುರಿತು ಮಹತ್ವದ ಹೇಳಿಕೆ ನೀಡಿದೆ.

ಹೌದು.. ಉಗ್ರಗಾಮಿಗಳ ವಿರುದ್ಧ ಭಾರತೀಯ ಸೇನೆ ಆರಂಭಿಸಿದ್ದ ಆಪರೇಷನ್ ಸಿಂಧೂರ್ (Operation Sindoor) ಕಾರ್ಯಾಚರPahalgam terror attackಣೆ ಮುಗಿದಿಲ್ಲ. ಅದು ಇನ್ನೂ ಮುಂದುವರೆದಿದೆ ಎಂದು ಭಾರತೀಯ ವಾಯುಪಡೆ ಭಾನುವಾರ ಮಹತ್ವದ ಹೇಳಿಕೆ ನೀಡಿದೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಉದ್ದೇಶಪೂರ್ವಕ ಮತ್ತು ವಿವೇಚನಾಯುಕ್ತ ರೀತಿಯಲ್ಲಿ ನಡೆಸಲಾಗಿದೆ ಎಂದು ಭಾರತೀಯ ವಾಯುಸೇನೆ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎನ್‌ಎಸ್‌ಎ ಅಜಿತ್ ದೋವಲ್, ವಿದೇಶಾಂಗ ಸಚಿವ ಎಸ್ ಜೈಶಂಕರ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್, ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಭಾರತದ ವಾಯುಪಡೆಯ ಮುಖ್ಯಸ್ಥ ಅಮರ್ ಪ್ರೀತ್ ಸಿಂಗ್ ಮತ್ತು ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಅವರೊಂದಿಗೆ ಉನ್ನತ ಮಟ್ಟದ ಸಭೆಯ ನಂತರ ಭಾರತೀಯ ವಾಯುಪಡೆಯಿಂದ ಈ ಹೇಳಿಕೆ ಬಂದಿದೆ.

Operation Sindoor Still Ongoing
'1971 ಮತ್ತು 2025 ಎರಡೂ ಒಂದೇ ಅಲ್ಲ...': Indira Gandhi ಸೇನಾ ಕಾರ್ಯಾಚರಣೆ ಕುರಿತು Shashi Tharoor ಹೇಳಿದ್ದೇನು?

ಯಶಸ್ವಿಯಾಗಿ ಗುರಿ ತಲುಪಿದ್ದೇವೆ: IAF

ಇನ್ನು ಭಾರತೀಯ ವಾಯುಪಡೆ (ಐಎಎಫ್) ಆಪರೇಷನ್ ಸಿಂಧೂರ್‌ನಲ್ಲಿ ತನಗೆ ನಿಯೋಜಿಸಲಾದ ಕಾರ್ಯಗಳನ್ನು ನಿಖರತೆ ಮತ್ತು ವೃತ್ತಿಪರತೆಯೊಂದಿಗೆ ಯಶಸ್ವಿಯಾಗಿ ನಿರ್ವಹಿಸಿದೆ. ಕಾರ್ಯಾಚರಣೆಗಳನ್ನು ರಾಷ್ಟ್ರೀಯ ಉದ್ದೇಶಗಳಿಗೆ ಅನುಗುಣವಾಗಿ ಉದ್ದೇಶಪೂರ್ವಕ ಮತ್ತು ವಿವೇಚನಾಯುಕ್ತ ರೀತಿಯಲ್ಲಿ ನಡೆಸಲಾಯಿತು ಎಂದು ಹೇಳಿದೆ.

ಕಾರ್ಯಾಚರಣೆ ಪ್ರಗತಿಯಲ್ಲಿದೆ

ಇದೇ ವೇಳೆ ಭಾರತೀಯ ಸೇನೆ ಆರಂಭಿಸಿದ್ದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ, ಸರಿಯಾದ ಸಮಯದಲ್ಲಿ ವಿವರವಾದ ಬ್ರೀಫಿಂಗ್ ಅನ್ನು ನಡೆಸಲಾಗುವುದು. ಪರಿಶೀಲಿಸದ ಮಾಹಿತಿಯ ಊಹಾಪೋಹ ಮತ್ತು ಪ್ರಸರಣದಿಂದ ದೂರವಿರಲು ಐಎಎಫ್ ಎಲ್ಲರನ್ನೂ ಒತ್ತಾಯಿಸುತ್ತದೆ" ಎಂದು ಅದು ಹೇಳಿದೆ.

Operation Sindoor Still Ongoing
ಕದನ ವಿರಾಮ ಉಲ್ಲಂಘನೆ: ಇದಕ್ಕೆ ಪಾಕಿಸ್ತಾನವೇ ಸಂಪೂರ್ಣ ಹೊಣೆ- ವಿಕ್ರಮ್ ಮಿಸ್ರಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com