
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನಾಳೆಯಿಂದ ವಿಮಾನಗಳ ಹಾರಾಟ ಪುನರ್ ಆರಂಭವಾಗಲಿದೆ.
ಕದನ ವಿರಾಮ ಒಪ್ಪಂದದೊಂದಿಗೆ ಭಾರತ- ಪಾಕಿಸ್ತಾನ ನಡುವಣ ಉದ್ವಿಗ್ನತೆ ಶಮನಗೊಂಡ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಶ್ರೀನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನಾಳೆಯಿಂದ ಆರಂಭವಾಗಲಿದ್ದು, ಸಾಮಾನ್ಯ ವಿಮಾನಗಳ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ವಿಮಾನ ನಿಲ್ದಾಣ ಮುಚ್ಚಿದ್ದರಿಂದ ಹಜ್ ವಿಮಾನಗಳ ಹಾರಾಟವನ್ನು ಕೂಡಾ ಸ್ಥಗಿತಗೊಳಿಸಲಾಗಿತ್ತು.
ಭಾರತ ಮತ್ತು ಪಾಕಿಸ್ತಾನ ನಡುವಿನ ಸೇನಾ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಕಳೆದ ವಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ದೇಶದ 32 ವಿಮಾನ ನಿಲ್ದಾಣಗಳಲ್ಲಿ ವಿಮಾನ ಹಾರಾಟ ಪುನರ್ ಆರಂಭಕ್ಕೆ ಸಂಬಂಧಿಸಿದಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಪ್ರಕಟಣೆ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ನಾಳೆಯಿಂದ ಸಾಮಾನ್ಯ ವಿಮಾನಗಳ ಹಾರಾಟವನ್ನು ಏರ್ ಲೈನ್ಸ್ ಸಂಸ್ಥೆಗಳು ಆರಂಭಿಸಲಿವೆ. ಸ್ಪೈಸ್ ಜೆಟ್ ಹೆಚ್ಚುವರಿ ವಿಮಾನಗಳನ್ನು ಆರಂಭಿಸುತ್ತಿದೆ ಎಂದು ಅವರು ಮಾಹಿತಿ ನೀಡಿದರು.
Advertisement