India-Pak Ceasefire: ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ

ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವಿನ ನಿಗದಿತ ಮಾತುಕತೆಯ ನಂತರ, ಇಂದು ರಾತ್ರಿ 8 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
India-Pak Ceasefire: ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ
Updated on

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವಿನ ನಿಗದಿತ ಮಾತುಕತೆಯ ನಂತರ, ಇಂದು ರಾತ್ರಿ 8 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವಿನ ನಿಗದಿತ ಮಾತುಕತೆಗೆ ಮುಂಚಿತವಾಗಿ, ಪ್ರಧಾನಿ ಮೋದಿ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನೊಳಗೊಂಡ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಎನ್ಎಸ್ಎ ಅಜಿತ್ ದೋವಲ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಮತ್ತು ಮೂರೂ ಸೇನಾ ಮುಖ್ಯಸ್ಥರು ಭಾಗವಹಿಸಿದ್ದರು.

India-Pak Ceasefire: ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ
ಯುದ್ಧ ರೋಮ್ಯಾಂಟಿಕ್, ಬಾಲಿವುಡ್ ಸಿನಿಮಾ ಅಲ್ಲ; ಕದನ ವಿರಾಮ ಒಪ್ಪಂದ ಪ್ರಶ್ನಿಸುವವರಿಗೆ ಮಾಜಿ ಸೇನಾ ಮುಖ್ಯಸ್ಥ ಖಡಕ್ ಸಂದೇಶ!

ಪಾಕಿಸ್ತಾನ ಏನಾದರೂ ಮಾಡಿದರೆ ಭಾರತದ ಪ್ರತಿಕ್ರಿಯೆ ಹೆಚ್ಚು ವಿನಾಶಕಾರಿ ಮತ್ತು ಬಲವಾಗಿರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್‌ಗೆ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ನಿನ್ನೆ ಜೆಡಿ ವ್ಯಾನ್ಸ್ ಜೊತೆ ದೂರವಾಣಿ ಮೂಲಕ ಮಾತನಾಡಿರುವ ನರೇಂದ್ರ ಮೋದಿ "ಕಾಶ್ಮೀರದ ವಿಷಯದಲ್ಲಿ ಮೂರನೇಯವರ ಮಧ್ಯಸ್ಥಿಕೆ ಬೇಕಾಗಿಲ್ಲ. ಪಾಕಿಸ್ತಾನ ತನ್ನಲ್ಲಿರುವ ಉಗ್ರರನ್ನು ನಮಗೆ ಹಸ್ತಾಂತರಿಸಬೇಕು ಈ ಷರತ್ತಿಗೆ ಒಪ್ಪಿದರೆ ಮಾತ್ರ ಮಾತುಕತೆಗೆ ಸಿದ್ಧರಿದ್ದೇವೆ, ಅದರ ಹೊರತಾಗಿ ಮಾತನಾಡಲು ಬೇರೇನೂ ಇಲ್ಲ. ಪಾಕ್ ಆಕ್ರಮಿತ ಕಾಶ್ಮೀರ ನಮಗೆ ಮರಳಬೇಕು. ಕಾಶ್ಮೀರದ ಬಗ್ಗೆ ಭಾರತದ ನಿಲುವು ಸ್ಪಷ್ಟವಾಗಿದೆ" ಎಂದು ಕಡ್ಡಿ ಮುರಿದಂತೆ ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com