
ಶ್ರೀನಗರ: ದೇಶವನ್ನುದ್ದೇಶಿಸಿ ಮೋದಿ ಆಪರೇಷನ್ ಸಿಂದೂರದ ಬಗ್ಗೆ ಮಾತನಾಡುತ್ತಾ, ಪಾಕ್ ಗೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಪಾಕಿಸ್ತಾನ ಜಮ್ಮು-ಕಾಶ್ಮೀರದ ಸಾಂಬಾದಲ್ಲಿ ಡ್ರೋನ್ ದಾಳಿ ಮುಂದುವರೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಜಮ್ಮು ಮತ್ತು ಕಾಶ್ಮೀರ: ಸಾಂಬಾದಲ್ಲಿ ಕತ್ತಲೆಯಾದಾಗ ಭಾರತದ ವಾಯು ರಕ್ಷಣಾ ಪಡೆಗಳು ಪಾಕಿಸ್ತಾನಿ ಡ್ರೋನ್‌ಗಳನ್ನು ತಡೆಹಿಡಿಯುತ್ತಿದ್ದಂತೆ ಕೆಂಪು ಗೆರೆಗಳು ಮತ್ತು ಸ್ಫೋಟಗಳು ಕೇಳಿಬಂದವು ಎಂದು ಎಎನ್ಐ ಸೇರಿದಂತೆ ಹಲವು ರಾಷ್ಟ್ರೀಯ ಮಾಧ್ಯಮಗಳು ವರದಿ ಪ್ರಕಟಿಸಿವೆ.
ಜಮ್ಮು-ಕಾಶ್ಮೀರವಷ್ಟೇ ಅಲ್ಲದೇ ಕಥುವಾ, ಅಮೃತ್ ಸರಗಳಲ್ಲಿಯೂ ಪಾಕ್ ಡ್ರೋನ್ ಗಳು ಭಾರತದ ಮೇಲೆ ದಾಳಿಗೆ ಯತ್ನಿಸಿದ್ದು, ಭಾರತೀಯ ಸೇನೆ ಅವುಗಳನ್ನು ಸಮರ್ಥವಾಗಿ ಎದುರಿಸಿದೆ.
ಸದ್ಯಕ್ಕೆ ಪಾಕಿಸ್ತಾನದ ಭಯೋತ್ಪಾದಕ ಮತ್ತು ಮಿಲಿಟರಿ ತಾಣಗಳ ಮೇಲಿನ ದಾಳಿಯನ್ನು ನಾವು ನಿಲ್ಲಿಸಿದ್ದೇವೆ ಅಷ್ಟೇ. ಪಾಕಿಸ್ತಾನ ಅಪ್ರಚೋದಿತ ದಾಳಿಗಳು ನಡೆದರೆ ಅದಕ್ಕೆ ತಕ್ಕ ಉತ್ತರವನ್ನು ನಮ್ಮ ಸೇನಾ ಪಡೆಗಳು ನೀಡಲಿವೆ ಎಂದರು. ಯಾವುದೇ ಪರಮಾಣು ಬೆದರಿಕೆಗಳು ಅಥವಾ ಬ್ಲ್ಯಾಕ್‌ಮೇಲಿಂಗ್ ಗಳು ನಮ್ಮ ಮುಂದೆ ನಡೆಯುವುದಿಲ್ಲ ಎಂದು ಒತ್ತಿ ಹೇಳಿದ ಮೋದಿ, ಭಾರತದಲ್ಲಿ ಭಯೋತ್ಪಾದಕ ದಾಳಿಗಳಿಗೆ ಸೂಕ್ತ ಪ್ರತಿಕ್ರಿಯೆಯನ್ನು ಎದುರಿಸಬೇಕಾಗುತ್ತದೆ ಎಂದು ಮೋದಿ ದೇಶದ ಜನತೆಯನ್ನುದ್ದೇಶಿಸಿ ಮಾಡಿದ್ದ ಭಾಷಣದಲ್ಲಿ ಎಚ್ಚರಿಕೆ ನೀಡಿದ್ದರು. ಈ ಎಚ್ಚರಿಕೆಯ ಕೆಲವೇ ನಿಮಿಷಗಳಲ್ಲಿ ಪಾಕ್ ಉದ್ಧಟತನ ತೋರಿದ್ದು ಮತ್ತೆ ಭಾರತದ ಪ್ರದೇಶಗಳ ಮೇಲೆ ದಾಳಿಗೆ ಯತ್ನಿಸಿದೆ.
Advertisement