Kashmir: ಶೋಪಿಯಾನ್'ನಲ್ಲಿ ಎನ್ಕೌಂಟರ್; ಸೇನೆ ಗುಂಡಿಗೆ ಮೂವರು LeT ಉಗ್ರರು ಹತ; Video

ಶೋಪಿಯಾನ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಭಾರತೀಯ ಸೇನೆ ಹಾಗೂ ಸಿಆರ್‌ಪಿಎಫ್‌ ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ.

ಶೋಪಿಯಾನ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಭಾರತೀಯ ಸೇನೆ ಹಾಗೂ ಸಿಆರ್‌ಪಿಎಫ್‌ ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದವು.

ಭದ್ರತಾ ಪಡೆಗಳು ಶಂಕಿತರ ಸ್ಥಳಕ್ಕೆ ತೆರಳುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಉಗ್ರರ ದಾಳಿಗೆ ಭದ್ರತಾ ಪಡೆಗಳು ದಿಟ್ಟ ಉತ್ತರ ನೀಡಿದ್ದು, ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಬದಲಾಯಿಸಿ, ಸ್ಥಳವನ್ನು ಸುತ್ತುವರೆದಿದ್ದಾರೆ.

ಈ ವೇಳೆ ಮೂವರು ಉಗ್ರರನ್ನು ಹತ್ಯೆ ಮಾಡಿದ್ದು, ಅವರನ್ನು ಶಾಹಿದ್ ಅಹ್ಮದ್ ಕುಟ್ಟೇ (LeT/TRF), ಅದ್ನಾನ್ ಶಾಫಿ (LeT/TRF) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಭಯೋತ್ಪಾದಕನನ್ನು ಗುರುತಿಸಲಾಗಿಲ್ಲ. ಭಯೋತ್ಪಾದಕರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ.

ಈ ನಡುವೆ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಗೆ ಕಾರಣರಾದವರ ಬಗ್ಗೆ ವಿಶ್ವಾಸಾರ್ಹ ಮಾಹಿತಿ ನೀಡಿದವರಿಗೆ 20 ಲಕ್ಷ ರೂ ಬಹುಮಾನ ನೀಡುವುದಾಗಿ ಘೋಷಿಸುವ ಪೋಸ್ಟರ್‌ಗಳು ಪುಲ್ವಾಮಾ ಜಿಲ್ಲೆಯಾದ್ಯಂತ ಕಾಣಿಸಿಕೊಂಡಿದ್ದು, ಇದಾದ ಕೆಲವೇ ಗಂಟೆಗಳಲ್ಲೇ ಈ ಎನ್‌ಕೌಂಟರ್ ನಡೆದಿದೆ.

ಸಂಗ್ರಹ ಚಿತ್ರ
ಪಹಲ್ಗಾಮ್ ದಾಳಿ: 3 ಉಗ್ರರ ಫೋಟೋ ರಿಲೀಸ್; ಸುಳಿವು ಕೊಟ್ಟವರಿಗೆ 20 ಲಕ್ಷ ರೂ ಇನಾಮು!

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com