ಭದ್ರತೆ ಆತಂಕ: ಏಳು ನಗರಗಳಿಗೆ ಏರ್ ಇಂಡಿಯಾ, ಇಂಡಿಗೋ ವಿಮಾನ ಹಾರಾಟ ರದ್ದು

ಜಮ್ಮು, ಲೇಹ್, ಜೋಧ್‌ಪುರ, ಅಮೃತಸರ, ಭುಜ್, ಜಾಮ್‌ನಗರ, ಚಂಡೀಗಢ ಮತ್ತು ರಾಜ್‌ಕೋಟ್‌ಗೆ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಏರ್ ಇಂಡಿಯಾ ರದ್ದುಗೊಳಿಸಿದೆ.
Air India flight
ಏರ್ ಇಂಡಿಯಾ ವಿಮಾನ
Updated on

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ವಾಯುಪ್ರದೇಶ ನಿರ್ಬಂಧಗಳು ಮತ್ತು ಹೆಚ್ಚಿನ ಭದ್ರತಾ ಕ್ರಮಗಳನ್ನು ಉಲ್ಲೇಖಿಸಿ, ಇಂಡಿಗೋ ಮತ್ತು ಏರ್ ಇಂಡಿಯಾ ಸಂಸ್ಥೆಗಳು ಇಂದು ಮಂಗಳವಾರ ಉತ್ತರ ಮತ್ತು ಪಶ್ಚಿಮ ಭಾರತದ ಅನೇಕ ನಗರಗಳಿಗೆ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿವೆ.

ಜಮ್ಮು, ಲೇಹ್, ಜೋಧ್‌ಪುರ, ಅಮೃತಸರ, ಭುಜ್, ಜಾಮ್‌ನಗರ, ಚಂಡೀಗಢ ಮತ್ತು ರಾಜ್‌ಕೋಟ್‌ಗೆ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಏರ್ ಇಂಡಿಯಾ ರದ್ದುಗೊಳಿಸಿದೆ.

ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿರುವ ವಿಮಾನಯಾನ ಸಂಸ್ಥೆ, ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಮ್ಮು, ಲೇಹ್, ಜೋಧ್‌ಪುರ, ಅಮೃತಸರ, ಭುಜ್, ಜಾಮ್‌ನಗರ, ಚಂಡೀಗಢ ಮತ್ತು ರಾಜ್‌ಕೋಟ್‌ಗೆ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಇಂದು ರದ್ದುಗೊಳಿಸಲಾಗಿದೆ. ಪರಿಸ್ಥಿತಿಯನ್ನು ಕೂಲಂಕಷವಾಗಿ ಗಮನಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಮೊನ್ನೆ ಶನಿವಾರ ರಾತ್ರಿ 11:59 ರವರೆಗೆ ಶ್ರೀನಗರ, ಜಮ್ಮು, ಅಮೃತಸರ, ಲೇಹ್, ಚಂಡೀಗಢ ಮತ್ತು ರಾಜ್‌ಕೋಟ್‌ಗೆ ಹೋಗುವ ಮತ್ತು ಅಲ್ಲಿಂದ ಹೊರಡುವ ಎಲ್ಲಾ ವಿಮಾನಗಳನ್ನು ರದ್ದುಗೊಳಿಸುವುದಾಗಿ ಇಂಡಿಗೋ ಘೋಷಿಸಿದೆ.

ನಿನ್ನೆ ಸೋಮವಾರ ಸಂಜೆ, ಅಮೃತಸರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನವು ಅಮೃತಸರದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತಂದ ನಂತರ ದೆಹಲಿಗೆ ಮರಳಿತು. ಭಾರತ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ಮಿಲಿಟರಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಚ್ಚಲ್ಪಟ್ಟ 32 ವಿಮಾನ ನಿಲ್ದಾಣಗಳಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಸೋಮವಾರ ಕಾರ್ಯಾಚರಣೆಯನ್ನು ಪುನರಾರಂಭಿಸಿತ್ತು.

ಮೇ 9 ರಂದು ಪ್ರಾರಂಭವಾದ ನಾಗರಿಕ ವಿಮಾನ ಸೇವೆಗಳ ಸ್ಥಗಿತಗೊಳಿಸುವಿಕೆಯು ಶ್ರೀನಗರ ಮತ್ತು ಅಮೃತಸರ ಸೇರಿದಂತೆ ಉತ್ತರ ಮತ್ತು ಪಶ್ಚಿಮ ಭಾರತದ ಹಲವಾರು ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ಪರಿಣಾಮ ಬೀರಿತು. ಗಡಿಯಲ್ಲಿ ಹೆಚ್ಚಿದ ಉದ್ವಿಗ್ನತೆಯ ನಂತರ ತಾತ್ಕಾಲಿಕ ಮುಚ್ಚುವಿಕೆಯನ್ನು ಆರಂಭಿಸಿ ಮೇ 15ರವರೆಗೆ ವಿಮಾನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com