ಅಮೃತಸರ ಕಳ್ಳಭಟ್ಟಿ ದುರಂತ: ಸಾವಿನ ಸಂಖ್ಯೆ 21ಕ್ಕೆ ಏರಿಕೆ, 10 ಜನರ ಬಂಧನ; ನಾಲ್ವರು ಅಧಿಕಾರಿಗಳ ಅಮಾನತು

ಘಟನೆಗೆ ಸಂಬಂಧಿಸಿದಂತೆ ಉಪ ಪೊಲೀಸ್ ವರಿಷ್ಠಾಧಿಕಾರಿ, ಸ್ಟೇಷನ್ ಹೌಸ್ ಆಫೀಸರ್(SHO), ಮಜಿತಾ ಉಪವಿಭಾಗದ ಅಬಕಾರಿ ಮತ್ತು ತೆರಿಗೆ ಅಧಿಕಾರಿ(ETO) ಮತ್ತು ಅಬಕಾರಿ ಇನ್ಸ್‌ಪೆಕ್ಟರ್ ಸೇರಿದಂತೆ ನಾಲ್ವರು ಅಧಿಕಾರಿಗಳ ಅಮಾನತುಗೊಳಿಸಲಾಗಿದೆ.
ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ
ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ
Updated on

ಚಂಡೀಗಢ: ಅಮೃತಸರ ಕಳ್ಳಭಟ್ಟಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 21 ಕ್ಕೆ ಏರಿದ್ದು, ಪಂಜಾಬ್‌ನ ಮಜಿತಾ ಪ್ರದೇಶದ ಐದು ಗ್ರಾಮಗಳಲ್ಲಿ ನಕಲಿ ಮದ್ಯ ಸೇವಿಸಿ 10 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಸರಬರಾಜುದಾರ ಮತ್ತು ಪ್ರಮುಖ ಆರೋಪಿ ಸೇರಿದಂತೆ ಹತ್ತು ಜನರನ್ನು ಬಂಧಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಉಪ ಪೊಲೀಸ್ ವರಿಷ್ಠಾಧಿಕಾರಿ, ಸ್ಟೇಷನ್ ಹೌಸ್ ಆಫೀಸರ್(SHO), ಮಜಿತಾ ಉಪವಿಭಾಗದ ಅಬಕಾರಿ ಮತ್ತು ತೆರಿಗೆ ಅಧಿಕಾರಿ(ETO) ಮತ್ತು ಅಬಕಾರಿ ಇನ್ಸ್‌ಪೆಕ್ಟರ್ ಸೇರಿದಂತೆ ನಾಲ್ವರು ಅಧಿಕಾರಿಗಳ ಅಮಾನತುಗೊಳಿಸಲಾಗಿದೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ
ಪಂಜಾಬ್: ಕಳ್ಳಭಟ್ಟಿ ಸೇವಿಸಿ ಕನಿಷ್ಠ 15 ಜನರು ಸಾವು; 10 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಮೃತರಲ್ಲಿ ಭಂಗಲಿ, ಪಾತಾಳಪುರಿ, ಮರಾರಿ ಕಲಾನ್, ಥೆರೆವಾಲ್ ಮತ್ತು ತಲ್ವಾಂಡಿ ಘುಮಾನ್ ಗ್ರಾಮಗಳ ಯುವಕರು ಸೇರಿದ್ದಾರೆ ಎಂದು ಮೂಲಗಳು ಬಹಿರಂಗಪಡಿಸಿವೆ.

ಇತರ ಹತ್ತು ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಅಮೃತಸರ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೀಗಾಗಿ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎನ್ನಲಾಗಿದೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಮರಾರಿ ಕಲಾನ್‌ನಲ್ಲಿ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿದ್ದು, ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ ಮೃತರ ಮಕ್ಕಳ ಶಿಕ್ಷಣದ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಅವರು ಭರವಸೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com