CBSE 12ನೇ ತರಗತಿ ಫಲಿತಾಂಶ ಪ್ರಕಟ: ಶೇ. 88.39 ವಿದ್ಯಾರ್ಥಿಗಳು ತೇರ್ಗಡೆ

ಈ ವರ್ಷ, ಶೇಕಡಾ 88.39 ರಷ್ಟು ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ, ಕಳೆದ ವರ್ಷದ ಶೇಕಡಾ 87.98 ಕ್ಕಿಂತ ಸ್ವಲ್ಪ ಹೆಚ್ಚಾಗಿದೆ.
Representational image
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಸಿಬಿಎಸ್‌ಇ 12ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಂದು ಮಂಗಳವಾರ ಪ್ರಕಟವಾಗಿದ್ದು, ವಿದ್ಯಾರ್ಥಿನಿಯರು ಶೇಕಡಾ 5ರಷ್ಟು ಹೆಚ್ಚಿನ ಅಂಕ ಗಳಿಸಿ ಮೇಲುಗೈ ಸಾಧಿಸಿದ್ದಾರೆ ಎಂದು ಪರೀಕ್ಷಾ ನಿಯಂತ್ರಕ ಸನ್ಯಾಮ್ ಭಾರದ್ವಾಜ್ ತಿಳಿಸಿದ್ದಾರೆ.

ಈ ವರ್ಷ, ಶೇಕಡಾ 88.39 ರಷ್ಟು ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ, ಕಳೆದ ವರ್ಷದ ಶೇಕಡಾ 87.98 ಕ್ಕಿಂತ ಸ್ವಲ್ಪ ಹೆಚ್ಚಾಗಿದೆ. ವಿದ್ಯಾರ್ಥಿನಿಯರು ಶೇಕಡಾ 91.64 ರಷ್ಟು ಉತ್ತೀರ್ಣರಾಗಿದ್ದರೆ, ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ ಪ್ರಮಾಣ ಶೇಕಡಾ 85.70 ರಷ್ಟಿದೆ.

ತೃತೀಯ ಲಿಂಗ ಅಭ್ಯರ್ಥಿಗಳು ಕಳೆದ ವರ್ಷದ ಶೇಕಡಾ 50 ಕ್ಕೆ ಹೋಲಿಸಿದರೆ ಈ ವರ್ಷ ಎಲ್ಲರೂ ಉತ್ತೀರ್ಣರಾಗಿದ್ದು, ಶೇಕಡಾ 100 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಒಟ್ಟು 1,11,544 ಅಭ್ಯರ್ಥಿಗಳು ಶೇಕಡಾ 90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದರೆ, 24,867 ಅಭ್ಯರ್ಥಿಗಳು ಶೇಕಡಾ 95 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ.

ಈ ವರ್ಷ ಒಟ್ಟು 16,92,794 ಅಭ್ಯರ್ಥಿಗಳು 12 ನೇ ತರಗತಿಯ ಬೋರ್ಡ್ ಪರೀಕ್ಷೆಗೆ ಹಾಜರಾಗಿದ್ದರು.

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶದಲ್ಲಿ ಬೆಂಗಳೂರು ನಾಲ್ಕನೇ ಸ್ಥಾನ ಪಡೆದುಕೊಂಡಿದ್ದು, ಶೇ.95.95 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆಗೆ ಹಾಜರಾದ 21,745 ವಿದ್ಯಾರ್ಥಿಗಳಲ್ಲಿ 20,786 ವಿದ್ಯಾರ್ಥಿಗಳು ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಬಾಲಕಿಯರ ಉತ್ತೀರ್ಣ ಪ್ರಮಾಣ ಶೇ.96.90 ರಷ್ಟಿದ್ದು, ಹುಡುಗರಿಗಿಂತ ಶೇ.95.14 ರಷ್ಟು ಹೆಚ್ಚಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com