
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳವಾರ ಮಧ್ಯಾಹ್ನ ವಿಮಾನ ಸೇವೆ ಪುನರಾರಂಭಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆದಾಗ್ಯೂ, ಕಾಶ್ಮೀರ ಕಣಿವೆಗೆ ಆಗಮಿಸುವ ಮತ್ತು ಅಲ್ಲಿಂದ ತೆರಳುವ ಹಲವಾರು ವಿಮಾನಗಳು ವಿಳಂಬವಾಗಿವೆ ಎಂದು ಅವರು ಹೇಳಿದ್ದಾರೆ. ಆದರೆ ಕೆಲವು ವಿಮಾನಯಾನ ಸಂಸ್ಥೆಗಳು ಈಗಾಗಲೇ ದಿನದ ಸೇವೆಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿವೆ.
ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ಮೇ 9 ರಂದು ಶ್ರೀನಗರ ವಿಮಾನ ನಿಲ್ದಾಣ ಸೇರಿದಂತೆ ಗಡಿ ರಾಜ್ಯಗಳಾದ್ಯಂತ 31 ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು.
ಶ್ರೀನಗರ, ಲೇಹ್, ಜಮ್ಮು, ಅಮೃತಸರ, ಪಠಾಣ್‌ಕೋಟ್, ಚಂಡೀಗಢ, ಜೋಧ್‌ಪುರ, ಜೈಸಲ್ಮೇರ್, ಶಿಮ್ಲಾ, ಧರ್ಮಶಾಲಾ ಮತ್ತು ಜಾಮ್‌ನಗರ ಸೇರಿದಂತೆ 31 ವಿಮಾನ ನಿಲ್ದಾಣಗಳನ್ನು ಬಂದ್ ಮಾಡಲಾಗಿತ್ತು.
Advertisement