ಪಾಕಿಸ್ತಾನ ಹೈ ಕಮಿಷನ್ ಸಿಬ್ಬಂದಿಯನ್ನು ಹೊರಹಾಕಿದ ಭಾರತ; ದೇಶ ತೊರೆಯಲು 24 ಗಂಟೆಗಳ ಗಡುವು!
ನವದೆಹಲಿ: ಕೇಂದ್ರ ಸರ್ಕಾರ ಮಂಗಳವಾರ ರಾಷ್ಟ್ರ ರಾಜಧಾನಿಯಲ್ಲಿರುವ ಪಾಕಿಸ್ತಾನ ಹೈ ಕಮಿಷನ್ ಸಿಬ್ಬಂದಿಯನ್ನು ಹೊರಹಾಕಿದೆ.
ಅವರ ಅಧಿಕೃತ ಸ್ಥಾನಮಾನಕ್ಕೆ ಅನುಗುಣವಾಗಿಲ್ಲದ ಚಟುವಟಿಕೆಗಳಿಗಾಗಿ (persona non grata ) ಪಾಕಿಸ್ತಾನದ ಹೈಕಮಿಷನ್‌ನಲ್ಲಿದ್ದ ಸಿಬ್ಬಂದಿ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದ್ದು, 24 ಗಂಟೆಗಳ ಒಳಗೆ ಭಾರತ ತೊರೆಯುವಂತೆ ಆದೇಶಿಸಲಾಗಿದೆ.
ಬೇಹುಗಾರಿಕೆ ಆರೋಪದ ಮೇಲೆ ಸಿಕ್ಕಿಬಿದ್ದಿರುವ ವ್ಯಕ್ತಿ, ಒಬ್ಬ ಸಿಬ್ಬಂದಿಯಾಗಿದ್ದು, ಅಧಿಕಾರಿಯಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿದೆ.
ಭಾರತದಲ್ಲಿ ತನ್ನ ಅಧಿಕೃತ ಸ್ಥಾನಮಾನಕ್ಕೆ ಅನುಗುಣವಾಗಿಲ್ಲದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ನವದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ನಲ್ಲಿದ್ದ ಸಿಬ್ಬಂದಿಯೊಬ್ಬರನ್ನು ದೇಶದಿಂದ ಹೊರಗೆ ಹಾಕಲಾಗಿದ್ದು, 24 ಗಂಟೆಯೊಳಗೆ ದೇಶ ತೊರೆಯುವಂತೆ ಸೂಚಿಸಲಾಗಿದೆ.
ಪಾಕಿಸ್ತಾನ ಹೈಕಮಿಷನ್, ಈ ಕುರಿತು ಇಂದು ಆದೇಶ ಹೊರಡಿಸಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಪಹಲ್ಗಾಮ್ ಭಯೋತ್ಪಾದನೆ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಗಡಿಯಾಚೆಗಿನ ನಾಲ್ಕು ರಾತ್ರಿಗಳು ನಡೆದ ಉಭಯ ದೇಶಗಳ ಮಿಲಿಟರಿ ಕಾರ್ಯಾಚರಣೆ ಬಳಿಕ ಮೇ 10 ರಂದು ಕದನ ವಿರಾಮ ಒಪ್ಪಂದ ಜಾರಿಯಾಗಿತ್ತು. ಇದಾದ ಬೆನ್ನಲ್ಲೇ ಇದೀಗ ಪಾಕಿಸ್ತಾನ ಹೈ ಕಮಿಷನ್ ದೇಶದಿಂದ ಹೊರಹಾಕಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ