ಕೊಯಮತ್ತೂರು: ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣದ ಎಲ್ಲಾ ಒಂಬತ್ತು ಅಪರಾಧಿಗಳಿಗೆ ಕೊಯಮತ್ತೂರಿನ ಮಹಿಳಾ ನ್ಯಾಯಾಲಯವು ಮಂಗಳವಾರ ರಂದು 'ಸಾಯುವವರೆಗೆ ಜೈಲು ಶಿಕ್ಷೆ' ವಿಧಿಸಿದೆ.
ಆರು ವರ್ಷಗಳ ಹಿಂದೆ ತಮಿಳುನಾಡನ್ನು ಬೆಚ್ಚಿಬೀಳಿಸಿದ್ದ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶೆ ಆರ್. ನಂದಿನಿ ದೇವಿ ಅವರು ಇಂದು ಈ ಮಹತ್ವದ ತೀರ್ಪು ನೀಡಿದ್ದಾರೆ.
ಸಂತ್ರಸ್ತ ಮಹಿಳೆಯರಿಗೆ ಒಟ್ಟಾರೆ 85 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಅಪರಾಧಿಗಳಾದ ಕೆ. ತಿರುನಾವುಕ್ಕರಸು(34), ಎನ್. ರಿಶ್ವಂತ್, ಅಲಿಯಾಸ್ ಶಬರಿರಾಜನ್(32), ಎಂ. ಸತೀಶ್ (33), ಟಿ. ವಸಂತ ಕುಮಾರ್ (30), ಆರ್. ಮಣಿವಣ್ಣನ್ (32), ಹರೋನ್ ಪಾಲ್ (32), ಪಿ. ಬಾಬು, ಅಲಿಯಾಸ್ ಬೈಕ್ ಬಾಬು (33), ಕೆ. ಅರುಳಾನಂದಂ (39), ಮತ್ತು ಎಂ. ಅರುಣ್‌ಕುಮಾರ್ ಗೆ ಸಾಯುವವರೆಗೆ ಜೈಲು ಶಿಕ್ಷೆ ನೀಡಲಾಗಿದೆ.
2016 ಮತ್ತು 2018 ರ ನಡುವೆ ನಡೆದ ಬ್ಲ್ಯಾಕ್‌ಮೇಲ್ ಸೇರಿದಂತೆ ಹಲವಾರು ಘಟನೆಗಳಲ್ಲಿ ಆರೋಪಗಳನ್ನು ಎದುರಿಸುತ್ತಿರುವ ಈ ಅಪರಾಧಿಗಳ ವಿರುದ್ಧ ಕ್ರಿಮಿನಲ್ ಪಿತೂರಿ, ಲೈಂಗಿಕ ಕಿರುಕುಳ, ಅತ್ಯಾಚಾರ, ಸಾಮೂಹಿಕ ಅತ್ಯಾಚಾರ ಮತ್ತು ಸುಲಿಗೆ ಆರೋಪ ಹೊರಿಸಲಾಗಿದೆ.

ಸಿಬಿಐ ಪರವಾಗಿ ಹಾಜರಾದ ವಿಶೇಷ ಸರ್ಕಾರಿ ಅಭಿಯೋಜಕ ವಿ. ಸುರೇಂದ್ರ ಮೋಹನ್, ಆರೋಪಿಗಳ ವಯಸ್ಸು ಮತ್ತು ಕೌಟುಂಬಿಕ ಹಿನ್ನೆಲೆಯನ್ನು ಉಲ್ಲೇಖಿಸಿ ಶಿಕ್ಷೆ ಕಡಿಮೆ ಮಾಡುವಂತೆ ಪ್ರತಿವಾದಿಗಳ ಪರ ವಕೀಲರು ಕೋರಿದ್ದಾರೆ ಎಂದು ಹೇಳಿದರು.
ಫೆಬ್ರವರಿ 24, 2019 ರಂದು 19 ವರ್ಷದ ಸಂತ್ರಸ್ತೆ ನೀಡಿದ್ದ ದೂರಿನ ಆಧಾರದ ಮೇಲೆ ಮೇ 21, 2019 ರಂದು ಕೊಯಮತ್ತೂರು ಮಹಿಳಾ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಲಾಗದಿತ್ತು. ಆದಾಗ್ಯೂ, ಕಾರ್ಯವಿಧಾನದ ವಿಳಂಬದಿಂದಾಗಿ ಮದ್ರಾಸ್ ಹೈಕೋರ್ಟ್ ಮಧ್ಯಪ್ರವೇಶಿಸಿ, ಈ ಪ್ರಕರವನ್ನು ಕೊಯಮತ್ತೂರಿನ ಇಂಟಿಗ್ರೇಟೆಡ್ ಕೋರ್ಟ್ ಕಾಂಪ್ಲೆಕ್ಸ್‌ಗೆ ವರ್ಗಾಯಿಸಿ, ಪ್ರತ್ಯೇಕ ಕೋರ್ಟ್ ರೂಮ್ ವ್ಯವಸ್ಥೆ ಮಾಡುವಂತೆ ನಿರ್ದೇಶಿಸಿತ್ತು.
ಪ್ರಾಸಿಕ್ಯೂಷನ್ ಮತ್ತು ಡಿಫೆನ್ಸ್ ವಾದಗಳು ಪೂರ್ಣಗೊಂಡ ನಂತರ, ನ್ಯಾಯಾಲಯವು ಇಂದು ಪ್ರಕರಣದ ಎಲ್ಲಾ ಆರೋಪಿಗಳು ತಪ್ಪಿತಸ್ಥರು ಎಂದು ತೀರ್ಪು ಪ್ರಕಟಿಸಿತ್ತು. ಮಧ್ಯಾಹ್ನ ಶಿಕ್ಷೆ ಪ್ರಕಟಿಸಿದೆ.
ತೀರ್ಪು ಘೋಷಣೆಯ ಸಮಯದಲ್ಲಿ ಕೊಯಮತ್ತೂರು ಕೋರ್ಟ್ ಕಾಂಪ್ಲೆಕ್ಸ್‌ನಲ್ಲಿ ಭಾರಿ ಜನ ಸೇರಿದ್ದರು. ಆರೋಪಿಗಳ ಕುಟುಂಬ ಸದಸ್ಯರು ಸಹ ಹಾಜರಿದ್ದರು.
ಇದಕ್ಕೂ ಮೊದಲು, ಆರೋಪಿಗಳನ್ನು ಬೆಳಗ್ಗೆ 8:30 ಕ್ಕೆ ಪೂರ್ಣ ಭದ್ರತಾ ವ್ಯವಸ್ಥೆಗಳೊಂದಿಗೆ ಸೇಲಂ ಕೇಂದ್ರ ಕಾರಾಗೃಹದಿಂದ ನ್ಯಾಯಾಲಯಕ್ಕೆ ಕರೆತರಲಾಗಿತ್ತು.
Advertisement