
ಶ್ರೀನಗರ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರ ಪೋಸ್ಟರ್‌ಗಳನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಿಡುಗಡೆಗೊಳಿಸಿದ್ದು, ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಇನಾಮು ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಉಗ್ರರ ದಾಳಿಯ ಬೆನ್ನಲ್ಲೇ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ನಿಗ್ನ ವಾತಾವರಣ ನಿರ್ಮಾಣವಾಗಿದೆ.
ಇದರ ಬೆನ್ನಲ್ಲೇ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಪತ್ತೆ ಹಚ್ಚಲು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮೂವರು ಶಂಕಿತ ಪಾಕ್ ಉಗ್ರರ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಿದ್ದಾರೆ.
ಪೋಸ್ಟರ್‌ನಲ್ಲಿರುವ ಉಗ್ರರ ಕುರಿತು ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಜೊತೆಗೆ ಸುಳಿವು ಕೊಟ್ಟವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದೂ ಭರವಸೆ ನೀಡಿದ್ದಾರೆ.
ಇದಕ್ಕೂ ಮೊದಲು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ)ಗೆ ಸೇರಿದ ಮೂವರು ಭಯೋತ್ಪಾದಕರ ಚಿತ್ರವನ್ನು ಬಿಡುಗಡೆ ಮಾಡಲಾಗಿತ್ತು. ಅನಂತ್‌ನಾಗ್ ನಿವಾಸಿ ಆದಿಲ್ ಹುಸೇನ್ ಥೋಕರ್, ಪಾಕಿಸ್ತಾನಿ ಪ್ರಜೆ ಅಲಿ ಭಾಯ್ ಅಲಿಯಾಸ್ ತಲ್ಹಾ ಭಾಯ್ ಮತ್ತು ಹಾಶಿಮ್ ಮೂಸಾ ಅಲಿಯಾಸ್ ಸುಲೇಮಾನ್ ರೇಖಾಚಿತ್ರಗಳನ್ನು ಬಿಡುಗಡೆ ಮಾಡಲಾಗಿತ್ತು.
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಮೇ 7ರಂದು `ಆಪರೇಷನ್ ಸಿಂಧೂರ’ (Operation Sindoor) ಹೆಸರಿನಲ್ಲಿ ಪಾಕ್‌ನ 9 ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ನಡೆಸಿತು. ಅದಾದ ಬಳಿಕ ಪಾಕಿಸ್ತಾನ ಹಲವು ಬಾರಿ ಅಪ್ರಚೋದಿತ ದಾಳಿ ನಡೆಸಿದ್ದು, ಮೇ 10ರಂದು ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಿಸಿವೆ.
Advertisement