
ನವದೆಹಲಿ: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ 26 ನಾಗರಿಕರ ಪ್ರಾಣಕ್ಕೆ ಕಾರಣವಾದ ಭೀಕರ ಭಯೋತ್ಪಾದಕ ದಾಳಿಗೆ ಭಾರತದ ಮಿಲಿಟರಿ ಪ್ರತಿಕ್ರಿಯೆಯಾದ ಆಪರೇಷನ್ ಸಿಂಧೂರ್‌ನ ಯೋಜನೆ ಮತ್ತು ಅದರ ಕಾರ್ಯಗತಗೊಳಿಸುವಿಕೆಯ ಬಗ್ಗೆ ಸಶಸ್ತ್ರ ಪಡೆಗಳ ಸುಪ್ರೀಂ ಕಮಾಂಡರ್ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬುಧವಾರ ರಕ್ಷಣಾ ಪಡೆಗಳ ಮುಖ್ಯಸ್ಥರು (ಸಿಡಿಎಸ್) ಮತ್ತು ಮೂರು ಪಡೆಗಳ ಮುಖ್ಯಸ್ಥರು ವಿವರಿಸಿದರು.
ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಏರ್ ಚೀಫ್ ಮಾರ್ಷಲ್ ಎ ಪಿ ಸಿಂಗ್ ಮತ್ತು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಅವರೊಂದಿಗೆ ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಅವರು ಕಾರ್ಯಾಚರಣೆಯ ವಿವರವನ್ನು ನೀಡಲು ರಾಷ್ಟ್ರಪತಿಗಳನ್ನು ಭೇಟಿ ಮಾಡಿದರು.
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ನಲ್ಲಿರುವ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ್ ನ್ನು ಪ್ರಾರಂಭಿಸಲಾಯಿತು. ಪಹಲ್ಗಾಮ್‌ನಲ್ಲಿ ನಡೆದ ಕ್ರೂರ ಭಯೋತ್ಪಾದಕ ದಾಳಿಗೆ ನೇರ ಪ್ರತೀಕಾರವಾಗಿ ಈ ಕಾರ್ಯಾಚರಣೆ ನಡೆಯಿತು ಮತ್ತು ಗಡಿಯಾಚೆಗಿನ ಭಯೋತ್ಪಾದನೆಯನ್ನು ಸುಗಮಗೊಳಿಸಲು ಬಳಸಲಾಗುವ ಮೂಲಸೌಕರ್ಯವನ್ನು ನಾಶ ಮಾಡುವ ಗುರಿಯನ್ನು ಈ ಕಾರ್ಯಾಚರಣೆ ಹೊಂದಿತ್ತು.
ಭಾರತೀಯ ಸಶಸ್ತ್ರ ಪಡೆಗಳ ವೃತ್ತಿಪರತೆ, ಧೈರ್ಯ ಮತ್ತು ತ್ವರಿತ ಕ್ರಮಕ್ಕಾಗಿ ರಾಷ್ಟ್ರಪತಿಗಳು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
"ಭಯೋತ್ಪಾದನೆಯ ವಿರುದ್ಧ ಭಾರತದ ಪ್ರತಿಕ್ರಿಯೆಯನ್ನು ಅದ್ಭುತ ಯಶಸ್ಸಿಗೆ ಕಾರಣವಾದ ಸಶಸ್ತ್ರ ಪಡೆಗಳ ಶೌರ್ಯ ಮತ್ತು ಸಮರ್ಪಣೆಯನ್ನು ರಾಷ್ಟ್ರಪತಿಗಳು ಶ್ಲಾಘಿಸಿದರು" ಎಂದು ರಾಷ್ಟ್ರಪತಿ ಭವನ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.
Advertisement